ಕೋಲಾರ, (ಆಗಸ್ಟ್.26): ಸಾಲ ಹಾಗೂ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ-ಪತ್ನಿ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕನಕನ ಪಾಳ್ಯದ ಸಂತೋಷ್ (35) ಹಾಗೂ ಭಾವನಾ (25) ಆತ್ಮಹತ್ಯೆಗೆ ಶರಣಾದ ದಂಪತಿ. ಶನಿವಾರ ರಾತ್ರಿ ಮನೆಯ ಕೋಣೆಯಲ್ಲಿ ವಯರ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ.
ಕುಟುಂಬದಲ್ಲಿ ಸಾಲ ಹಾಗೂ ಇನ್ನಿತರ ಕಾರಣದಿಂದ ಕಲಹ ನಡೆಯುತ್ತಿತ್ತು. ಚಿಕ್ಕ ಮಗನ ಹೃದಯದಲ್ಲಿ ಸಣ್ಣರಂಧ್ರ ಬಿದ್ದು ಆರೋಗ್ಯ ಹದಗೆಟ್ಟಿತ್ತು. ಚಿಕಿತ್ಸೆಗಾಗಿ ದಂಪತಿ ಲಕ್ಷಾಂತರ ರೂ. ಸಾಲ ಮಾಡಿದ್ದು ಬಡ್ಡಿ ಕಟ್ಟಲು ಪರದಾಡುತ್ತಿದ್ದರು. ಹೀಗಾಗಿ ನೊಂದು ದಂಪತಿ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾ ರೆಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಎಸ್‌ಪಿ ನಿಖಿಲ್ ಅವರು ಭೇಟಿ ನೀಡಿದ್ದರು. ಕೋಲಾರ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಎಸ್ ಎನ್ ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ನಂತರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….