ದೊಡ್ಡಬಳ್ಳಾಪುರ, (ಆಗಸ್ಟ್ 26); ತಾಲೂಕಿನಾದ್ಯಂತ ಶ್ರೀ ಕೃಷ್ಣಜನ್ಮಾಷ್ಟಮಿಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.
ಸಾಂಪ್ರದಾಯಿಕ ಆಚರಣೆ ಮಾಡುವವರ ಮನೆಗಳಲ್ಲಿ ಬಗೆಬಗೆಯ ನೇವೇದ್ಯಗಳನ್ನು ಇರಿಸಿ ಶ್ರೀ ಕೃಷ್ಣನ ಪೂಜೆ ಮಾಡುವುದರೊಂದಿಗೆ, ಸಿಹಿ ಹಂಚಿ ಆಚರಣೆ ಮಾಡಲಾಯಿತು. ಮಕ್ಕಳಿಗೆ ಕೃಷ್ಣ ರಾಧೆ ವೇಷ ತೊಡಿಸಿ, ಸಂಭ್ರಮಿಸುತ್ತಿದ್ದ ದೃಶ್ಯ ಕಂಡು ಬಂದಿತು.
ಶ್ರೀ ಕೃಷ್ಣ ಹಾಗೂ ವೇಣುಗೋಪಾಲ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇವಾಲಯಗಳಲ್ಲಿ ವಿಶೇಷ: ನಗರದ ಗಾಂಧಿ ನಗರದ ಖಿಲ್ಲೆ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್‍ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ದೇವಾಲಯದಲ್ಲಿ ಬೆಳಿಗ್ಗೆ ಅಭಿಷೇಕ, ವಿಶೇಷ ಅಲಂಕಾರ, ನಂತರ ಭಜನೆ, ಸಂಜೆ ವಿಷ್ಣು ಸಹಸ್ರ ಪಾರಾಯಣ, ಬಾಲ ಕೃಷ್ಣ ಲೀಲ ಅಂಗವಾಗಿ ಮಕ್ಕಳ ಕೃಷ್ಣ ರಾಧೆ ವೇಷಭೂಷಣ ಪ್ರದರ್ಶನ, ಭರತ ನಾಟ್ಯ ಮೊದಲಾದ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಕೆರೆಬಾಗಿಲು ರಸ್ತೆಯಲ್ಲಿನ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ವಿಶೇಷ ತೊಟ್ಟಿಲು ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಗರದ ಕುಚ್ಚಪ್ಪನಪೇಟೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯ, ತಾಲೂಕಿನ ತಪಸಿಹಳ್ಳಿಯ ವೇಣುಗೋಪಾಲ ಸ್ವಾಮಿ, ತೂಬಗೆರೆಯ ಯದ್ದಲಹಳ್ಳಿಯ ವೇಣುಗೋಪಾಲ ಸ್ವಾಮಿ, ದೇವಾಲಯದಲ್ಲಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್‍ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….