ಮೂಡಾ ದಾಖಲೆ ವೈಟ್ನರ್ ಹಿಂದಿನ ಅಕ್ಷರಗಳು ಬಯಲು: ವಿರೋಧ ಪಕ್ಷಗಳಿಗೆ ಗುಮ್ಮಿದ ಸಿಎಂ| ವಿಡಿಯೋ ನೋಡಿ

ಬೆಂಗಳೂರು, (ಆಗಸ್ಟ್.26): ಮುಡಾ ಪ್ರಕರಣದಲ್ಲಿ ಕೆಲ ದಾಖಲೆಗಳನ್ನು ವೈಟ್ನರ್ ಬಳಸಿ ತಿರುಚಲಾಗಿದೆ ಎಂದು ಬಿಜೆಪಿ-ಜೆಡಿಎಸ್ ನಾಯಕರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲೈದು ಪದಗಳಿಗೆ ವೈಟ್ನರ್ ಹೆಚ್ಚಿದನ್ನೇ ಮಹಾನ್ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್ ನಾಯಕರೇ, ವೈಟ್ನರ್ ಹಿಂದಿರುವ ಅಕ್ಷರಗಳೇನು ಎಂಬುವುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ ಎಂದು ವಿಡಿಯೋವನ್ನು ಸಿಎಂ ಶೇರ್ ಮಾಡಿದ್ದಾರೆ.

ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ. ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲೈದು ಪದಗಳಿಗೆ ವೈಟ್ನರ್ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ.

ಇದರಲ್ಲಿ ಟಿಪ್ಪಣಿಯೂ ಇಲ್ಯ ಆದೇಶವೂ ಇಲ್ಲ ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ.

“ವೈಟ್ಲರ್ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ಲರ್ ಹಚ್ಚಿ ಬಂದಿದ್ದಾರೆಂದು” ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!