ದೊಡ್ಡಬಳ್ಳಾಪುರ, (ಆಗಸ್ಟ್ 26): ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.59 ಲಕ್ಷ ಹಣ ಸಂಗ್ರಹವಾಗಿದೆ.
ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಸೋಮವಾರ ಎಣಿಕೆ ಮಾಡಲಾಯಿತು. ಹುಂಡಿ ಎಣಿಕೆಯಲ್ಲಿ ಒಟ್ಟು 59,34,739ರೂ. ಮೊತ್ತ ಸಂಗ್ರಹವಾಗಿದೆ.
ಇದರೊಂದಿಗೆ 90,000 ರೂ ಮೌಲ್ಯದ 01 ಕೆಜಿ 800 ಗ್ರಾಂ ಬೆಳ್ಳಿ, 5,760 ರೂ ಮೌಲ್ಯದ 1 ಗ್ರಾ.600 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಈ ವೇಳೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಾಹಶೀಲ್ದಾರ್ ರವರು ಜಿ.ಜೆ. ಹೇಮಾವತಿ, ಪ್ರಧಾನ ಅರ್ಚಕರು ಆರ್ ಸುಬ್ರಹ್ಮಣ್ಯ, ದೇವಾಲಯದ ಸಿಬ್ಬಂದಿ ನಂಜಪ್ಪ ಹಾಗೂ ದೇವಾಲಯದ ಸಿಬ್ಬಂದಿಗಳು ಹಾಗೂ ಕೆನರಾ ಬ್ಯಾಂಕ್ ಸಿಬ್ಬಂದಿ ಪೊಲೀಸ್ ಇಲಾಖೆ ಸಮ್ಮುಖದಲ್ಲಿ ಹುಂಡಿ ಹಣವನ್ನು ಎಣಿಕೆ ಮಾಡಲಾಯಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….