Astrology: ಚೂಪಾದ ವಸ್ತುಗಳನ್ನು ಎಚ್ಚರಿಕೆಯಿಂದ ಬಳಸಿ; ದಿನ ಭವಿಷ್ಯ

ಸೋಮವಾರ, ಆಗಸ್ಟ್ 26, 2024, ದೈನಂದಿನ ರಾಶಿ ಭವಿಷ್ಯ 

ಮೇಷ ರಾಶಿ: ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತ ರಾಗಿದ್ದರೆ ಸಮಸ್ಯೆಗಳು ಎದುರಾಗಬ ಹುದು. ಜಾಗೃತರಾಗಿರಿ. (ಭಕ್ತಿಯಿಂದ ಶ್ರೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ವೃಷಭ ರಾಶಿ: ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದಿನದ ಆರಂಭದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮ ವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹ ದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ, ವಿಶ್ರಾಂತಿ ಪಡೆದುಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ. (ಭಕ್ತಿಯಿಂದ ಶ್ರೀ ಶಕ್ತಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಮನೆಯಲ್ಲಿ ಶುಭ ಸಮಾರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿದೆ. ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ. ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆಯಿಂದ ಬಳಸಿ. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ಈವರೆಗೆ ಹಣಕಾಸಿನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟು ಕೊಳ್ಳಬೇಕು. ಒಂದು ತಾಳ್ಮೆ ಮತ್ತೊಂದು ಸಹನೆ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಎಲ್ಲಾ ಅಡೆತಡೆಗಳನ್ನು ಎದುರಿಸಿದ್ದೀರಿ. ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳನ್ನು ನಿರಾಕರಿಸಿದರೆ ಒತ್ತಾಯಿಸಬೇಡಿ. ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭ ವಾಗುವುದು.)

ತುಲಾ ರಾಶಿ: ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ,ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿವಹಿಸಿ. (ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತರಾಗದಿರಿ. ಮನಸ್ಸಿನಿಂದ ಆಲೋ ಚಿಸಬೇಡಿ. ಉದ್ವಿಗ್ನತೆಗೆ ಒಳಗಾಗದಿರಿ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿಗೆ ಬದ್ಧರಾಗಿರಿ. ಸಂಗಾತಿಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗಳ ಮೇಲೆ ಗಮನಹರಿಸುವ ಸ ಮಯ ಬಂದಿದೆ.ಅದರತ್ತ ಗಮನಹರಿಸಿ. ವಿಳಂಬ ನೀತಿ ಅನುಸರಿಸದಿರಿ. ಸಾಧನೆ ಮಾಡುವ ಸಮಯ ಸನ್ನಿಹಿತವಾಗಿದೆ. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. ನೀವು ಮಕ್ಕಳು ಅಥವಾ ಕಿರಿಯ ಸಂಬಂಧಗಳ ಜವಾಬ್ದಾರಿಯನ್ನು ಹೊಂದಿದ್ದರೆ ಮಾತ್ರ ನೀವು ಸಂತೃಪ್ತರಾಗಿರುತ್ತೀರಿ. (ಭಕ್ತಿಯಿಂದ ನವಗ್ರಹ ದೇವತೆ ಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ: ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರಲು ಇನ್ನೂ ಕೆಲವು ಮಾರ್ಗಗಳಿವೆ. ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ, ವಿಶೇಷವಾಗಿ ಇತರ ಜನರು ನಿಮ್ಮ ಬಗ್ಗೆ ನಿಜವಾದ ಆಸಕ್ತಿಯನ್ನು ತೋರಿಸುತ್ತಿದ್ದಾರೆ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಅಷ್ಟಮಿ 

ನಕ್ಷತ್ರ: ಕೃತ್ತಿಕಾ ನಕ್ಷತ್ರ.

ರಾಹುಕಾಲ: 07:30AM ರಿಂದ 09:00AM

ಗುಳಿಕಕಾಲ: 01:30PM ರಿಂದ 03:00PM

ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!