ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಆಗಸ್ಟ್ 27): ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಸೆಪ್ಟೆಂಬರ್ 13ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ “ಬೃಹತ್ ಉದ್ಯೋಗಮೇಳ”ವನ್ನು ಆಯೋಜಿಸಲು ಉದ್ದೇಶಿಸಲಾದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ದಿನದಂದು ಉದ್ಯೋಗಕಾಂಕ್ಷಿಗಳ ಮತ್ತು ಉದ್ಯೋಗದಾತರ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಜಿಲ್ಲಾ ಮಟ್ಟದ ಬೃಹತ್ ಉದ್ಯೋಗಮೇಳದಲ್ಲಿ ಅಂದಾಜು 100 ನಿಯೋಜಕರು/ಕಂಪನಿಗಳು ಭಾಗವಹಿಸಲ್ಲಿದ್ದು, ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ.
ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು https://bangalorerural.nic.in/en/job-fair/5 ನೋಂದಾಯಿಸಿಕೊಳ್ಳಬಹುದಾಗಿರುತ್ತದೆ.
ಬೃಹತ್ ಉದ್ಯೋಗಮೇಳವು ಸೆಪ್ಟೆಂಬರ್ 13ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲ್ಲಿದ್ದು, ಭಾಗವಹಿಸುವ ಅಭ್ಯರ್ಥಿಗಳು ಬಯೋಡಾಟ ಹಾಗೂ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಈ ಮೂಲಕ ತಿಳಿಸಲಾಗಿದೆ.
ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳದ ಉದ್ಯೋಗಕಾಂಕ್ಷಿಗಳು, ಉದ್ಯೋಗಮೇಳ ನಡೆಯುವ ಸ್ಥಳದಲ್ಲಿಯೇ ‘’ಅಭ್ಯರ್ಥಿಗಳ ನೋಂದಣಿ ಕೌಂಟರ್”ಗಳಲ್ಲಿಯೂ ಹೆಸರನ್ನು ನೋಂದಾಯಿಸಿಕೊಂಡು ಭಾಗವಹಿಸಬಹುದಾಗಿರುತ್ತದೆ.
ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಅಭ್ಯರ್ಥಿಗಳು ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ತಾಲ್ಲೂಕು ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿಯೂ ಕೂಡ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….