ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, (ಆಗಸ್ಟ್.27); ಜಯದೇವ ಆಸ್ಪತ್ರೆ 24 ಗಂಟೆ ಕಾರ್ಯನಿರ್ವಹಿಸಲು ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. 

ಗಾಂಧಿನಗರ ವಿಧಾನಸಭಾ ಕ್ಷೇತ್ರದ  ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. 

ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳಿ ಎನ್ನುವ ಸೂಚನೆ ನೀಡಿದರು. 

ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ ಎಂದು ನುಡಿದರು.

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ ಎಂದರು.

ನಾನು ಸೇರಿ ಮಂತ್ರಿಗಳು,  ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಉಪ ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದರು.

ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಗೋಲ್ಡನ್ ಹವರ್ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ ಎಂದರು. 

ನಾನು ಬಜೆಟ್ ನಲ್ಲಿ ಹೇಳಿದ್ದನ್ನು ಜಾರಿ ಮಾಡಿ:ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚನೆ ನೀಡಿದರು. 

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ ಬಿಡುಗಡೆ ಮಾಡಿದ್ದೇನೆ. ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ ಎಂದು ಸಚಿವರಿಗೆ ಸೂಚನೆ ನೀಡಿದರು. 

ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ವಿಧಾನಸಭೆ ಅಧಿವೇಶನ; ಎನ್‌ಡಿಎ ಮೈತ್ರಿಕೂಟದ ಸಮನ್ವಯ ಸಭೆ

ವಿಧಾನಸಭೆ ಅಧಿವೇಶನ; ಎನ್‌ಡಿಎ ಮೈತ್ರಿಕೂಟದ ಸಮನ್ವಯ ಸಭೆ

ವಿಧಾನಸಭೆ ಮುಂಗಾರು ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಜೆಡಿಎಸ್ ಮತ್ತು ಬಿಜೆಪಿ (NDA) ಮೈತ್ರಿಕೂಟದ ಸಮನ್ವಯ ಸಭೆ ನಡೆಸಲಾಯಿತು.

[ccc_my_favorite_select_button post_id="112411"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು ಪರಾರಿ

ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು

ಕೃಷಿ ಜಮೀನುಗಳಲ್ಲಿನ ಬೋರ್ವೆಲ್ ಗೆ ಅಳವಡಿಸಿದ್ದ ಕೇಬಲ್ ವೈರ್ ಗಳನ್ನು (Cable wire) ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು (Thieves) ಬೆನ್ನತ್ತಿದ ರೈತರು, ವಾಹನವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

[ccc_my_favorite_select_button post_id="112373"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!