ಬೆಂಗಳೂರು, (ಆಗಸ್ಟ್.27): ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರವು ನಿರೀಕ್ಷೆಯಂತೆ ಮದ್ಯದ ದರ ಇಳಿಕೆ ಮಾಡುವ ಕುರಿತ ಮದ್ಯ ಮತ್ತು ಬಿಯರ್ ಬೆಲೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಅಂತಿನ ಅಧಿಸೂಚನೆ ಹರಡಿಸಿರುವ ಕುರಿತು ವರದಿಯಾಗಿದೆ.
ಅಕ್ಕಪಕ್ಕದ ರಾಜ್ಯಗಳ ಮದ್ಯದ ದರ ಪರಿಶೀಲಿಸಿ ನಮ್ಮಲ್ಲಿ ದರ ಪರಿಷ್ಕರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದ್ದಂತೆ ದುಬಾರಿ ದರದ ಮದ್ಯಗಳ ಬೆಲೆ ಆ.27ರಿಂದಲೇ ಶೇ.15 ರಿಂದ 20 ರಷ್ಟು ಇಳಿಕೆಯಾಗಲಿದೆ.
ತೆಲಂಗಾಣ, ಆಂಧ್ರ, ತಮಿಳುನಾಡು, ಕೇರಳ ಮತ್ತಿತರ ರಾಜ್ಯಗಳಲ್ಲಿ ದುಬಾರಿ ಬೆಲೆಯ ಮದ್ಯಗಳ ಬೆಲೆ ಕಡಿಮೆ ಇದೆ. ಆದರೆ ನಮ್ಮಲ್ಲಿ ಹೆಚ್ಚಾಗಿರುವುದರಿಂದ ಗಡಿ ಭಾಗದ ಜನರು ಬೇರೆ ರಾಜ್ಯಗಳಲ್ಲಿ ಮದ್ಯ ಖರೀದಿಸುತ್ತಿದ್ದಾರೆ ಎಂದು ಸರ್ಕಾರವು, ನೆರೆ ಹೊರೆ ರಾಜ್ಯಗಳ ಬೆಲೆ ನೋಡಿಕೊಂಡು ದರ ಪರಿಷ್ಕರಣೆಗೆ ಮುಂದಾಗಿತ್ತು.
ಇದನ್ನು ಸಿದ್ದರಾಮಯ್ಯ ಅವರು ಬಜೆಟ್‌ನಲ್ಲೂ ಘೋಷಿಸಿದ್ದರು. ಎರಡು ತಿಂಗಳ ಹಿಂದೆಯೇ ನೂತನ ‘ದರ’ ಅನ್ವಯವಾಗಬೇಕಿತ್ತಾದರೂ ಇದಕ್ಕೆ ಸರ್ಕಾರ ಒಪ್ಪಿಗೆ ನೀಡಿರಲಿಲ್ಲ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….