ಸುಬನ್ಸಿರಿ, (ಆಗಸ್ಟ್.28); ಚಲಿಸುತ್ತಿದ್ದ ಟ್ರಕ್ ಆಳವಾದ ಕಮರಿಗೆ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ನಿರಿ ಜಿಲ್ಲೆಯಲ್ಲಿ ಸಂಭವಿಸಿದೆ. ಇದೇ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹವಾಲ್ದಾರ್ ನಖತ್ ಸಿಂಗ್, ನಾಯಕ್ ಮುಖೇಶ್ ಕುಮಾರ್ ಮತ್ತು ಗ್ರೆನೇಡಿಯರ್ ಆಶಿಶ್ ಮೃತಪಟ್ಟವರು.
ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸೇನೆಯ ಈಸ್ಟರ್ನ್ ಕಮಾಂಡ್ ಸಿಬ್ಬಂದಿಯ ಸಾವಿಗೆ ಸಂತಾಪ ಸೂಚಿಸಿದೆ.
ಲೆಫ್ಟಿನೆಂಟ್ ಜನರಲ್ ಆರ್‌ಸಿ ತಿವಾರಿ, ಆರ್ಮಿ ಸಿಡಿಆರ್ ಇಸಿ ಮತ್ತು ಎಲ್ಲಾ ಶ್ರೇಣಿಯ ಯೋಧರು ಹವ್ ನಖತ್ ಸಿಂಗ್, ಎನ್‌ಕೆ ಮುಖೇಶ್ ಕುಮಾರ್ ಮತ್ತು ಜಿಡಿಆರ್ ಆಶಿಶ್ ಅವರ ತ್ಯಾಗ ಮತ್ತು ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇವೆ.
ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆಯು ದುಃಖಿತ ಕುಟುಂಬಗಳಿಗೆ ಬೆಂಬಲವಾಗಿ ನಿಂತಿದೆ ಎಂದು ಈಸ್ಟರ್ನ್ ಕಮಾಂಡ್ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….