ಹಾಸನ, (ಆಗಸ್ಟ್.28): ಮಾದಕ ವಸ್ತು ಗಾಂಜಾ ಸೇವನೆ ಮಾಡಿದ್ದ ಆರೋಪದ ಅಡಿಯಲ್ಲಿ ಮೂವರು ಇಂಜಿನಿಯರ್ ವಿದ್ಯಾರ್ಥಿಗಳನ್ನು ಹಾಸನ ನಗರ ಪೆನ್‌ಶೆನ್ ಮೊಹಲ್ಲಾ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಬೆಳಗಿನ ಜಾವ, 1 ಗಂಟೆ ಸಮಯದಲ್ಲಿ ಪಿಎಸ್‌ಐ ರವಿಶಂಕರ ಅವರು ಠಾಣಾ ಸರಹದ್ದಿನಲ್ಲಿ ರೌಂಡ್ಸ್ ನಲ್ಲಿದ್ದಾಗ ಮೂವರು ಯಾವುದೋ ಅಮಲು ಬರುವಂತಹ ವಸ್ತು ಸೇವನೆ ಮಾಡಿರುವಂತೆ ಕಂಡುಬಂದ ಕಾರಣ ಅನುಮಾನದಿಂದ ವಶಕ್ಕೆ ಪಡೆದಿದ್ದಾರೆ.
ಕೂಡಲೇ ಅವರನ್ನು ವಶಕ್ಕೆ ಪಡೆದಾಗ ಅವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಸಿಕ್ಕಿಬಿದ್ದವರನ್ನು ಹೊಳೆನರಸೀಪುರ ತಾಲೂಕು ತಟ್ಟೆಕೆರೆ ಗ್ರಾಮದ ಇಂಜಿನಿಯರಿಂಗ್ ಶಶಾಂಕ(21 ವರ್ಷ), ಹೊಳೆನರಸೀಪುರ ಪಟ್ಟಣದ ನರಸಿಂಹನಾಯಕ ನಗರದ ಯೋಗೇಶಗೌಡ(22 ವರ್ಷ), ಹಾಸನದ ಗುಡ್ಡೇನಹಳ್ಳಿಯ ಪ್ರಜ್ವಲ್ (21) ಎಂದು ಗುರುತಿಸಲಾಗಿದೆ.
ಈ ಮೂವರು ಇಂಜಿನಿಯರಿಂಗ್ ಓದುತ್ತಿದ್ದಾರೆ ಎನ್ನಲಾಗಿದೆ. ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿದ್ದರಿಂದ ಮೂವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….