ದೊಡ್ಡಬಳ್ಳಾಪುರ, (ಆಗಸ್ಟ್ 28); ಶಾಲೆಗೆ ತೆರಳಿದ್ದ ವೇಳೆ ಹಾವು ಕಚ್ಚಿದ ಪರಿಣಾಮ ಬಾಲಕ ನೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುರುಷನಹಳ್ಳಿಯಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು 15 ವರ್ಷದ ದೇವರಾಜು ಎಂದು ಗುರುತಿಸಲಾಗಿದೆ.
ಮಂಗಳವಾರ ಬೆಳಗ್ಗೆ ಶಾಲೆಗೆ ತೆರಳಿದ್ದು, ಬಳಿಕ ತೆಂಗಿನ ಕಾಯಿ ಆಯಲು ಹೋಗಿದ್ದನಂತೆ ಈ ವೇಳೆ ಹಾವು ಕಚ್ಚಿದ ಪರಿಣಾಮ ಮನೆಗೆ ಮರಳಿದ್ದಾನೆ.
ಪೋಷಕರು ನಾಟಿ ಔಷಧದ ಚಿಕಿತ್ಸೆ ಕೊಡಿಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಇಂದು ಬೆಳಗ್ಗೆ ಸಾವನಪ್ಪಿದ್ದಾನೆ.
ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
error: Content is protected !!