ಬೆಂಗಳೂರು, (ಆ.28): ಅಖಿಲ ಭಾರತ ವೀರಶೈವ ಮಹಾಸಭಾದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರು, ರಾಜ್ಯ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಸಮಿತಿ ಸದಸ್ಯರ ಚುನಾವಣೆ ಸೋಮವಾರ ನಡೆಯಿತು.
ಚುನಾವಣೆಯಲ್ಲಿ ಕರ್ನಾಟಕದಿಂದ 30, ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ತಲಾ ಐದು ಸದಸ್ಯರಂತೆ ಕೇಂದ್ರ ಕಾರ್ಯಕಾರಿ ಸಮಿತಿಯ ಒಟ್ಟು 55 ಸದಸ್ಯರು ಮತ್ತು ಕರ್ನಾಟಕ, ಕೇರಳ, ಆಂಧ್ರಪ್ರದೇಶ ರಾಜ್ಯ ಘಟಕಗಳ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಸಮಿತಿಯ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕದಲ್ಲಿ ಕಾರ್ಯನಿರ್ವಾಹಕ ಸಮಿತಿಯ 27 ಸಾಮಾನ್ಯ ಸದಸ್ಯರಿಗೆ ಮಹಾಸಭಾ ಮಹಾ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಈಶ್ವರ ಬಿ. ಖಂಡ್ರೆ ಹಾಗೂ ನೂತನ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿಯಾದ ಶಂಕರ ಎಂ.ಬಿದರಿ ನೇತೃತ್ವದ ಎಲ್ಲಾ 27 ಅಭ್ಯರ್ಥಿಗಳು ಹೆಚ್ಚು ಮತಗಳಿಸಿ ಜಯಶೀಲರಾಗಿ ದ್ದಾರೆ ಎಂದು ಮಹಾಸಭಾದ ಅಧ್ಯಕ್ಷ ಮತ್ತು ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಶಂಕರ ಎಂ.ಬಿದರಿ ಅವರನ್ನು ಸಂಸದ ಜಗದೀಶ್ ಶೆಟ್ಟರ್, ಮಾಜಿ ಸಂಸದ ಪ್ರತಾಪ್ ಸಿಂಹ ಅಭಿನಂದನೆ ಸಲ್ಲಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….