ಬೆಂಗಳೂರು, (ಆಗಸ್ಟ್.28): ಕಳೆದೊಂದು ವರ್ಷದಿಂದ ತಿರುಮಲ ತಿರುಪತಿಯ ಲಡ್ಡು ಪ್ರಸಾದದಲ್ಲಿ ಇಲ್ಲದ ನಂದಿನಿ ತುಪ್ಪದ ಸ್ವಾದ ಇನ್ನುಮುಂದೆ ಭಕ್ತಾದಿಗಳಿಗೆ ಪುನಃ ಲಭ್ಯ ವಾಗಲಿದೆ. ನಷ್ಟದ ನೆಪದಲ್ಲಿ ಕಳೆದ ವರ್ಷ ತಿರುಮಲ ತಿರುಪತಿಗೆ ನಂದಿನಿ ತುಪ್ಪ ಸರಬರಾಜನ್ನು ಕೆಎಂಎಫ್ ಸ್ಥಗಿತಗೊಳಿಸಿತ್ತು.
ಈ ತುಪ್ಪದ ಟ್ಯಾಂಕರ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಚಾಲನೆ ನೀಡಿದರು.
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದಿಂದ ಹಲವಾರು ವರ್ಷಗಳಿಂದ ಅಸ್ಮಾರ್ಕ್ ಸ್ಪೇಷಲ್ ಗ್ರೇಡ್ ಹೊಂದಿರುವ ಹಸುವಿನ ತುಪ್ಪವನ್ನು ಟ್ಯಾಂಕರ್ ಮೂಲಕ ತಿರುಮಲ ತಿರುಪತಿ ದೇವಸ್ಥಾನಕ್ಕೆ ಪವಿತ್ರ ಶ್ರೀವಾರಿ ಪ್ರಸಾದ ತಯಾರಿಕೆಗೆ ಸರಬರಾಜು ಮಾಡಲಾಗಿರುತ್ತದೆ.
2013-14ನೇ ಸಾಲಿನಿಂದ 2021-22ರ ವರೆಗೂ 5000 ಮೆಟ್ರಿಕ್ ಟನ್ ತುಪ್ಪವನ್ನು ತಿರುಮಲ ತಿರುಪತಿ ದೇವಸ್ಥಾನಕ್ಕೆ ಸರಬರಾಜು ಮಾಡಲಾಗಿರುತ್ತದೆ. ಪ್ರಸ್ತುತ “2024-25 ನೇ ಸಾಲಿನಲ್ಲಿ ತಿರುಪತಿ ದೇವಸ್ಥಾನಕ್ಕೆ ಪ್ರಾರಂಭಿಕವಾಗಿ 350 ಮೆಟ್ರಿಕ್ ಟನ್ ನಂದಿನಿ ತುಪ್ಪವನ್ನು ಸರಬರಾಜು ಮಾಡಲು ಟೆಂಡರ್ ಮೂಲಕ ಬೇಡಿಕೆಯನ್ನು ನೀಡಿರುತ್ತಾರೆ.
ಅದರಂತೆ ಬೇಡಿಕೆ ಅನುಗುಣವಾಗಿ ಹಸುವಿನ ತುಪ್ಪವನ್ನು ತಿರುಮಲ ತಿರುಪತಿ ದೇವಸ್ಥಾನಕ್ಕೆ ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….