ದೊಡ್ಡಬಳ್ಳಾಪುರ, (ಆಗಸ್ಟ್.29): ಶಾಲೆಗೆ ತೆರಳಿದ್ದ ವೇಳೆ ಹಾವು ಕಚ್ಚಿದ ಪರಿಣಾಮ ಬಾಲಕ ನೋರ್ವ ಮೃತಪಟ್ಟಿರುವ ಪ್ರಕರಣ ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಪುರುಷನಹಳ್ಳಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು 15 ವರ್ಷದ ದೇವರಾಜು ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಶಾಲೆಗೆ ತೆರಳಿದ್ದು,ಶಾಲೆಗೆ ಸಂಬಂಧಿಸಿದಂತೆ ಇರುವ ತೋಟದಲ್ಲಿ ಬಿದ್ದಿರುವ ತೆಂಗಿನ ಕಾಯಿಗಳನ್ನು ತರಲು ಇತರೆ ವಿದ್ಯಾರ್ಥಿಗಳೊಂದಿಗೆ ಹೋಗಿದ್ದ ವೇಳೆ ಹಾವು ಕಚ್ಚಿದ ಪರಿಣಾಮ ಮನೆಗೆ ಮರಳಿದ್ದಾನೆ. ಪೋಷಕರು ನಾಟಿ ಔಷಧಿಯ ಚಿಕಿತ್ಸೆ ಕೊಡಿಸಿದ್ದು,ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಸೇರಿರುವ ಈ ಶಾಲೆಯಲ್ಲಿನ ಶಿಕ್ಷಕರ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿ ಮೃತನ ಪೋಷಕರು ಹಾಗೂ ಸಂಬಂಧಿಗಳು ಬಾಲಕನ ಶವದೊಂದಿಗೆ ಶಾಲಾ ಆವರಣದಲ್ಲಿಯೇ ಧರಣಿ ನಡೆಸಿದರು.
ಡಿವೈಎಸ್ಪಿ ರವಿ ಅವರು ಮೃತ ಬಾಲಕನ ಪೋಷಕರೊಂದಿಗೆ ನಡೆಸಿದ ಮಾತುಕತೆ ಫಲಕಾರಿಯಾಗಿದ್ದು,ಶಾಲಾ ಆಡಳಿತ ಮಂಡಳಿ ಹಾಗೂ ಸರ್ಕಾರದಿಂದಲು ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.
ರಾತ್ರಿ 10 ಗಂಟೆಗೆ ಸುಮಾರಿಗೆ ಶಾಲಾ ಆವರಣದಿಂದ ಮೃತದೇಹವನ್ನು ತೆಗೆದುಕೊಂಡು ಹೋಗಿ ಐನಹಳ್ಳಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ಮುಂದಾದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….