October 6, 2024 12:34 pm

ಸೆ.13 ರಂದು ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ: ಕುಟುಂಬದ ಒಬ್ಬರಿಗೆ ಉದ್ಯೋಗಕ್ಕೆ ಚಿಂತನೆ – ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಆಗಸ್ಟ್ 30): ಜಿಲ್ಲೆಯಲ್ಲಿ 2 ಲಕ್ಷಕ್ಕೂ ಹೆಚ್ಚು ಕುಟುಂಬಗಳಿವೆ. ಪ್ರತಿ ಕುಟುಂಬದಲ್ಲಿ ಅರ್ಹ ಒಬ್ಬರಿಗೆ ಉದ್ಯೋಗ ಸಿಗುವಂತಾಗಬೇಕು ಎಂಬ ಆಶಯದಿಂದ ಸೆಪ್ಟೆಂಬರ್ 13 ರಂದು ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಹೆಚ್.ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆಡಿಟೋರಿಯಂ ನಲ್ಲಿ ನಡೆದ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ  ಸಂಬಂಧಿಸಿದಂತೆ  ಪೂರ್ವಭಾವಿ ಸಭೆಯಲ್ಲಿ ಅವರು ‌ಮಾತನಾಡಿದರು.

ಒಂದು‌ ಕುಟುಂಬಕ್ಕೆ ಒಂದು ಕೆಲಸ ಸಿಗಬೇಕು ಎಂಬ ಉದ್ದೇಶದಿಂದ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ಅಂದಾಜು  09 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿದೆ. ಉದ್ಯೋಗ ‌ಮೇಳಕ್ಕೂ‌ ಮುನ್ನ ಎಷ್ಟು ಕುಟುಂಬದಲ್ಲಿ ಕೆಲಸ ಇದೆ. ಎಷ್ಟರಲ್ಲಿ ಕೆಲಸವಿಲ್ಲ ಎಂಬ  ಮಾಹಿತಿ ಸಂಗ್ರಹಿಸಲಾಗುವುದು. ಹಾಗಾಗಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಎಂದರು.  ಇದುವರೆಗೂ ಉದ್ಯೋಗ ಮೇಳಕ್ಕೆ 50 ಕಂಪನಿಗಳು ನೊಂದಣಿಯಾಗಿದೆ. 100 ಕ್ಕೂ ಅಧಿಕ ಕಂಪನಿಗಳು‌ ನೋಂದಣಿಯಾಗುವ ನಿರೀಕ್ಷೆ ಇದೆ. 

 ಈವರೆಗೆ  1110 ಉದ್ಯೋಗಾಂಕ್ಷಿಗಳು ನೊಂದಣಿಯಾಗಿದ್ದಾರೆ. ಇನ್ನು ನೋಂದಣಿ ಹೆಚ್ಚಿಸಲು  ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು , ಜನಪ್ರತಿನಿಧಿಗಳು ಮುಖಂಡರು ಸಕ್ರಿಯವಾಗಿ  ಕಾರ್ಯ ನಿರ್ವಹಿಸಬೇಕು. ಇದುವರೆಗೂ ಕಂಪನಿಗಳಿಂದ ಸುಮಾರು 2000 ಉದ್ಯೋಗ ಲಭ್ಯವಿದೆ ಎಂಬ ಮಾಹಿತಿ ಬಂದಿದೆ. ಉದ್ಯೋಗಾಂಕ್ಷಿಗಳಿಗೆ ಯಾವುದೇ ತಾಂತ್ರಿಕ ಅಥವಾ ತಾಂತ್ರಿಕೇತರ  ಪದವಿ ಹೊಂದಿದ್ದರು ಅರ್ಹರಿಗೆ ತರಬೇತಿಯ ಜೊತೆಗೆ ಉದ್ಯೋಗ ಸಿಗುವಂತಾಗಬೇಕು ಎಂಬ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದರು.

ಜಿಲ್ಲಾ ಮಟ್ಟದ ಬೃಹತ್ ಉದ್ಯೋಗಮೇಳದಲ್ಲಿ ಅಂದಾಜು 100 ನಿಯೋಜಕರು/ಕಂಪನಿಗಳು ಭಾಗವಹಿಸಲ್ಲಿದ್ದು, ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ.

ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು https://bangalorerural.nic.in/en/job-fair/5 ನೋಂದಾಯಿಸಿ ಎಂದರು.

 ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕರು ಸೇರಿದಂತೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ಭೇಟಿ ನೀಡಿ ಕರಪತ್ರ ಹಂಚುವ ಮೂಲಕ ಉದ್ಯೋಗ ಮೇಳದ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು. ಸ್ಥಳೀಯ ಅಧಿಕಾರಿಗಳು , ಸ್ವಚ್ಚತಾ ವಾಹಿನಿ, ಆಟೋಗಳ ಮೂಲಕ ಜಾಗೃತಿ ‌ಮೂಡಿಸುವ ಮೂಲಕ ವ್ಯಾಪಕ ಪ್ರಚಾರ ನೀಡಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. 

ಸಭೆಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ರಾಜಣ್ಣ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ (ಬಯಪ)ಅಧ್ಯಕ್ಷರಾದ ಶಾಂತಕುಮಾರ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಎ.ಸ್ಪಿ ಸಿ.ಕೆ ಬಾಬಾ, ಎ.ಸಿ ದುರ್ಗಶ್ರೀ, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ವಿವಿಧ ಇಲಾಖೆಯ ಅಧಿಕಾರಿಗಳು,  ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Recent Posts

ರಾಜಕೀಯ

ಜನರ ಬಗ್ಗೆ ಇವರಿಗೆ ಕಿಂಚಿತ್ತೂ ಕಾಳಜಿ ಇಲ್ಲ; HDK ಕಿಡಿ| Video

ಜನರ ಬಗ್ಗೆ ಇವರಿಗೆ ಕಿಂಚಿತ್ತೂ ಕಾಳಜಿ ಇಲ್ಲ; HDK ಕಿಡಿ| Video

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗರಣಗಳ ಸುತ್ತ ಗಿರಕಿ ಹೊಡೆಯುತ್ತಿದೆಯೇ ಹೊರತು, ಹಿಂಗಾರು ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ಬಗ್ಗೆ ಇವರಿಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HDK)

[ccc_my_favorite_select_button post_id="93529"]
ರಾಜಮನೆತನಕ್ಕೆ ದಸರಾ ಅಧಿಕೃತ ಆಹ್ವಾನ

ರಾಜಮನೆತನಕ್ಕೆ ದಸರಾ ಅಧಿಕೃತ ಆಹ್ವಾನ

ಮೈಸೂರು; ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಬರುವಂತೆ ಜಿಲ್ಲಾಡಳಿತದಿಂದ ಭಾನುವಾರ ಸಂಜೆ ಅಧಿಕೃತವಾದ ಆಹ್ವಾನವನ್ನು ಮೈಸೂರಿನ ರಾಜವಂಶಸ್ಥರಿಗೆ ನೀಡಲಾಯಿತು. ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಅರಮನೆಯ

[ccc_my_favorite_select_button post_id="93086"]
ಶಬರಿಮಲೆ ಯಾತ್ರೆಗೆ ಇನ್ನು ಆನ್‌ಲೈನ್‌ ಬುಕ್ಕಿಂಗ್ ಕಡ್ಡಾಯ!: ಪಾರ್ಕಿಂಗ್ ಹೆಚ್ಚಳ, ರಸ್ತೆ ದುರಸ್ತಿ ಕೇರಳ ಸರ್ಕಾರ ಕ್ರಮ

ಶಬರಿಮಲೆ ಯಾತ್ರೆಗೆ ಇನ್ನು ಆನ್‌ಲೈನ್‌ ಬುಕ್ಕಿಂಗ್ ಕಡ್ಡಾಯ!: ಪಾರ್ಕಿಂಗ್ ಹೆಚ್ಚಳ, ರಸ್ತೆ ದುರಸ್ತಿ

ತಿರುವನಂತಪುರ: ಪ್ರಸಿದ್ದ ಧಾರ್ಮಿಕ ಕ್ಷೇತ್ರ ಶಬರಿಮಲೆ (Shabarimale) ದೇಗುಲದ ವಾರ್ಷಿಕ ಮಂಡಲಂ- ಮಕರವಿಳಕ್ಕು ಯಾತ್ರೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಈ ವರ್ಷ ಆನ್‌ಲೈನ್‌ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.

[ccc_my_favorite_select_button post_id="93522"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ಎಂಆರ್ ಇಲೆವೆನ್ ತಂಡಕ್ಕೆ ಸ್ನೇಹಲೋಕ ಕಪ್..!

Doddaballapura: ಎಂಆರ್ ಇಲೆವೆನ್ ತಂಡಕ್ಕೆ ಸ್ನೇಹಲೋಕ ಕಪ್..!

ದೊಡ್ಡಬಳ್ಳಾಪುರ: ಇತ್ತೀಚಿಗೆ ತಾಲೂಕಿನ ಮಧುರೆ ಹೋಬಳಿ ಕನಸವಾಡಿ ಮತ್ತು ಕನ್ನಮಂಗಲ ಮೈದಾನದಲ್ಲಿ ಆಯೋಜಿಸಿದ್ದ ಸ್ನೇಹಲೋಕ ಕಪ್- ಸೀಸನ್ 4ರ ಕ್ರಿಕೆಟ್ ಟೂರ್ನಿಯಲ್ಲಿ ಮಾರಸಂದ್ರದ ಎಂಆರ್ ಇಲೆವೆನ್ ತಂಡ ಪ್ರಥಮ ಸ್ಥಾನವನ್ನು ಪಡೆದು ಸ್ನೇಹಲೋಕ ಕಪ್

[ccc_my_favorite_select_button post_id="93285"]
cyber crime ತಡೆಗೆ ಪೊಲೀಸ್ ಸಿಬ್ಬಂದಿಗೆ ತರಬೇತಿ: ಸಚಿವ ಪರಮೇಶ್ವರ

cyber crime ತಡೆಗೆ ಪೊಲೀಸ್ ಸಿಬ್ಬಂದಿಗೆ ತರಬೇತಿ: ಸಚಿವ ಪರಮೇಶ್ವರ

ಧಾರವಾಡ; ಹೆಚ್ಚುತ್ತಿರುವ ಸೈಬರ್ ಅಪರಾಧಗಳ (cyber crime) ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ, ಸೈಬರ್ ಆರ್ಥಿಕ ಹಾಗೂ ನಾರ್ಕೊಟಿಕ್ಸ) ಠಾಣೆಗಳಿಗೆ ಎಸ್.ಪಿ.ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು. ರಾಷ್ಟ್ರೀಯ ವಿಧಿ ವಿಜ್ಞಾನ ಸಂಸ್ಥೆಯ ವಿವಿಧ ವಿಭಾಗಗಳಿಗೆ ಹಾಗೂ

[ccc_my_favorite_select_button post_id="93533"]
Accident; ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ.. ನಾಲ್ವರ ಸ್ಥಿತಿ ಗಂಭೀರ

Accident; ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ.. ನಾಲ್ವರ ಸ್ಥಿತಿ ಗಂಭೀರ

ಕೊರಟಗೆರೆ: ಖಾಸಗಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ (Accident) ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿ ಸಮೀಪ ನಡೆದಿದೆ. ಖಾಸಗಿ ಬಸ್ ತುಮಕೂರು

[ccc_my_favorite_select_button post_id="93502"]

ಆರೋಗ್ಯ

ಸಿನಿಮಾ

ನಿಜವಾಗುತ್ತಿದೆ ಅಭಿಮಾನಿಗಳ ನಂಬಿಕೆ.. Darshan ಪರ ವಕೀಲರ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಕಕ್ಕಾಬಿಕ್ಕಿ

ನಿಜವಾಗುತ್ತಿದೆ ಅಭಿಮಾನಿಗಳ ನಂಬಿಕೆ.. Darshan ಪರ ವಕೀಲರ ವಾದಕ್ಕೆ ಕೆಲ ಖಾಸಗಿ ಸುದ್ದಿ

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ಕಾರಣ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Darshan ) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್ ಅಕ್ಟೋಬರ್.8ಕ್ಕೆ ಮುಂದೂಡಿದೆ. ಪ್ರಸಾರವಾದ ಕಲಾಪದ

[ccc_my_favorite_select_button post_id="93494"]
error: Content is protected !!