ದಾಬಸ್‌ಪೇಟೆ, (ಆಗಸ್ಟ್.30): ಕ್ರೇನ್ ನಿರ್ವಹಣೆ ಮಾಡುತ್ತಿದ್ದಾಗ ಕಾರ್ಮಿಕನೊಬ್ಬ ಮೇಲಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಆಸ್ಟಲ್ ಇಂಟರ್‌ಬಿಲ್ಡ್ ಕಂಪನಿಯಲ್ಲಿ ಈ ದುರ್ಘಟನೆ ನಡೆದಿದ್ದು, ಬಿಹಾರ ಮೂಲದ ಕುಂದನ್ ಕುಮಾರ್(19) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ.
ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸುಮಾರು ಹತ್ತು ಅಡಿ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಕ್ರೇನ್ ನಿರ್ವಹಣೆಗೆ ಯಾವುದೇ ಮುಂಜಾಗ್ರತೆ ಕ್ರಮ ಕೈಗೊಳ್ಳದೆ ಇರುವುದೇ ಈ ಘಟನೆಗೆ ಕಾರಣ ಎಂದು ಕಾರ್ಮಿಕರು ಆರೋಪಿಸಿದ್ದು, ಘಟನಾ ಸ್ಥಳಕ್ಕೆ ದಾಬಸ್‌ಪೇಟೆ ಪೊಲೀಸ್ ಇನ್ಸ್ ಪೆಕ್ಟರ್ ರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುಂದರ್‌ಎಂಬುವವರ ವಿರುದ್ಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….