ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಆಗಸ್ಟ್ 30): ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತಾಲಯದ ನಿರ್ದೆಶನದಂತೆ ಆಗಸ್ಟ್ 30 ಹಾಗೂ 31ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಆಹಾರ ಉದ್ದಿಮೆಗಳಿಗೆ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ವಚ್ಛತೆ ಹಾಗೂ ನೈರ್ಮಲ್ಯತೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಆಹಾರ ಸುರಕ್ಷತೆ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಪರವಾನಗಿ ಪಡೆಯದ ಆಹಾರ ಉದ್ದಿಮೆಗಳಿಗೆ ಆಹಾರ ಪರವಾನಿಗೆ ನೀಡಲು ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಂಕಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….