ಹೊಸಕೋಟೆ, (ಆಗಸ್ಟ್ 30): ನಾಡಬಾಂಬ್ ಸ್ಫೋಟವಾಗಿದ್ದು ಬಿಎಸ್ಸಿ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ಸಂಭವಿಸಿದೆ.
ಮೃತ ದುರ್ದೈವಿಯನ್ನು 19 ವರ್ಷದ ಪವನ್ ಎಂದು ಗುರುತಿಸಲಾಗಿದ್ದರೆ, ಘಟನೆಯಲ್ಲಿ ತಂದೆ ನಾಗೇಶ್ ಸ್ಥಿತಿ ಗಂಭೀರವಾಗಿದೆ. ಸ್ಫೋಟದ ರಭಸಕ್ಕೆ ಮನೆಯ ಮೇಲ್ವಾವಣಿ ಛಿದ್ರ ಛಿದ್ರವಾಗಿದೆ.
ಕಾಡು ಹಂದಿ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….