ತುಮಕೂರು, (ಆಗಸ್ಟ್ 30); ರಾಜ್ಯದ ಜನತೆ ಜೆಡಿಎಸ್ ಬಿಜೆಪಿ ಮೈತ್ರಿಯನ್ನ ಒಪ್ಪಿದ್ದಾರೆ. ಟಿಕೆಟ್ ವಿಚಾರದಲ್ಲಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುತ್ತಾರೆ.ಈ ವಿಚಾರದಲ್ಲಿ ಚರ್ಚೆಗಳು ಆಗಬೇಕಾಗುತ್ತೆ. ಆಗ ಫಲಿತಾಂಶ ನಮ್ಮ ಪರ ಬರಲು ಸಾಧ್ಯ ಎಂದರು ಅವರು.
ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಅಂತಿಮವಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ NDA ಅಭ್ಯರ್ಥಿಯಾಗಿರುತ್ತೆ. ಜೆಡಿಎಸ್ ಬಿಜೆಪಿ ಚರ್ಚೆಯಿಲ್ಲ ನಾವು ಒಟ್ಟಾಗಿದ್ದೇವೆ, ಒಗ್ಗಟ್ಟಾಗಿದ್ದೇವೆ. ಹಾಗಾಗಿ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿ ಕಣದಲ್ಲಿ ಇರಲಿದ್ದಾರೆ ಎಂದರು.
ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಜೆಡಿಎಸ್ ಗೆ ಹುಮ್ಮಸ್ಸು ಬಂದಿದೆ. ರಾಜ್ಯದ ಜನತೆ ಬಿಜೆಪಿ- ಜೆಡಿಎಸ್ ಮೈತ್ರಿ ಒಪ್ಪಿದ್ದಾರೆ. ಹೆಚ್ಚು ಸಂಸದರನ್ನ ಆಯ್ಕೆ ಮಾಡಿ ಪ್ರಧಾನಿ ಮೋದಿ ಅವರಿಗೆ ಕೊಡುಗೆ ನೀಡಿದ್ದಾರೆ. ಸ್ಥಳೀಯ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ನಾವು ಒಟ್ಟಾಗಿ ಹೋಗುತ್ತೇವೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….