ಕಲಬುರಗಿ, (ಆಗಸ್ಟ್.30): ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರೊಬ್ಬರನ್ನು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅಮಾನತುಗೊಳಿಸಿದ್ದಾರೆ.
ಮೊರಾರ್ಜಿ ಶಾಲೆಯ ದೈಹಿಕ ಶಿಕ್ಷಕ ಪ್ರಭುಗೌಡ ಮಾಡಗಿ ಅಮಾನತುಗೊಂಡ ವ್ಯಕ್ತಿ. ಈ ಶಿಕ್ಷಕನ ಮೇಲೆ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದ ಕುರಿತು ಪ್ರಾಂಶುಪಾಲರಿಗೆ ಲಿಖಿತ ವಾಗಿ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಭು ದೊರೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಜಾವಿದ್ ಕರಂಗಿ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಾ.ಕರಬಸಮ್ಮ ಅವರು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದರು.
ಈ ವರದಿ ಆಧರಿಸಿ ಆರೋಪಿ ಶಿಕ್ಷಕನ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಿದ ಜಿಲ್ಲಾಧಿಕಾರಿ, ಸೇವೆಯಿಂದ ಅಮಾನತು ಮಾಡಿದ್ದಾರೆ.
ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ ಸೆರೆ: ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ದುರ್ವತ್ರನೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಮಹಾ ರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ.
ಮುಜಾಮ್ಮಿಲ್ ಬಂಧಿತ ಶಿಕ್ಷಕ. 7ನೇ ತರಗತಿಯ ವಿದ್ಯಾರ್ಥಿ ನಿಯೋರ್ವಳು ನಿತ್ಯ ಶಾಲೆಗೆ ತಡವಾಗಿ ಬರುತ್ತಿರುವುದನ್ನು ಶಾಲೆಯ ಪ್ರಾಂಶುಪಾಲರು ಪೋಷಕರ ಸಮ್ಮುಖದಲ್ಲಿ ಪ್ರಶ್ನಿಸಿದ್ದಾರೆ. ಆದರೆ ಆ ವೇಳೆ ಶಿಕ್ಷಕನ ವರ್ತನೆ ಬಗ್ಗೆ ಮಾತನಾಡಲು ಹಿಂಜರಿದ ವಿದ್ಯಾರ್ಥಿನಿ ಪೋಷಕರಿಗೆ ಶಿಕ್ಷಕನ ಬಗ್ಗೆ ತಿಳಿಸಿದ್ದಾಳೆ.
ಶಾಲೆಯ ಹಲವು ವಿದ್ಯಾರ್ಥಿನಿಯರ ಜತೆಗೂ ಶಿಕ್ಷಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ. ಪೋಷಕರ ದೂರಿನ ಮೇರೆಗೆ ಶಾಂತಿನಗರ ಪೊಲೀಸರು ಶಿಕ್ಷಕನ್ನನ ಬಂಧಿಸಿದ್ದು, ಆತನ ವಿರುದ್ದ ಪೋಕ್ಸ್ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….