ವಿದ್ಯುತ್ ಖಾಸಗೀಕರಣ ವಿರೋಧಿಸಿ ಸೆ.4ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ದೊಡ್ಡಬಳ್ಳಾಪುರ, (ಆಗಸ್ಟ್ 30); ರೈತರ ಕೃಷಿ ಪಂಪ್‌ಸೆಟ್ ಮೀಟರ್‌ಗಳಿಗೆ ಆಧಾರ್ ಜೋಡಣೆ ಮಾಡುವ ಮೂಲಕ ವಿದ್ಯುತ್ ಖಾಸಗೀಕರಣದ ಹುನ್ನಾರ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಇದಲ್ಲದೇ ವಿದ್ಯುತ್ ಲೈನ್‌ಗಳಿಗೆ, ಕೈಗಾರಿಕೆಗಳಿಗೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನ ಪಡಿಸಿಕೊಂಡು ಕೃಷಿಗೆ ಸಂಚಕಾರ ತರುವ ಸರ್ಕಾರದ ನೀತಿಗಳನ್ನು ವಿರೋಧಿಸಿ, ಸೆ.4ರಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ.

ಈ ಕುರಿತು ನಗರದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಕೆಂಚೇಗೌಡ, ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಮೀಟರ್ ಅಳವಡಿಸಿದ್ದ ಉಗ್ರವಾಗಿ ಹೋರಾಟ ನಡೆಸಲಾಗಿತ್ತು. ಈ ಮುಂಚೆ ಇದ್ದ ಕರ್ನಾಟಕ ವಿದ್ಯುತ್ ಮಂಡಲಿ (ಕೆಇಬಿ)ಯನ್ನು  ಐದು ವಿದ್ಯುತ್ ಸರಬರಾಜು ಕಂಪನಿಗಳನ್ನಾಗಿ ಮಾಡಿ, ಕಂಪನಿಗಳನ್ನು ಖಾಸಗೀಕರಣಕ್ಕೆ ವಹಿಸಲಾಗಿದೆ.

ಈ ಕಂಪನಿಗಳು ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್, ಭಾಗ್ಯ ಜ್ಯೋತಿ ಮೊದಲಾದ ಯೋಜನೆಗಳನ್ನು ಜಾರಿಗೆ ತರಲು ಹಿಂದೇಟು ಹಾಕಿ ಸರ್ಕಾರವನ್ನು ಪರೋಕ್ಷವಾಗಿ ಒತ್ತಾಯಿಸುವ ಫಲವಾಗಿ ಇಂದು ಕ್ರಮೇಣ, ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುವ ಹೆಜ್ಜೆ ಇರಿಸಿದೆ. ಡಿಜಿಟಲ್ ಮೀಟರ್, ಸಿಮ್ ಕಾರ್ಡ್ಗಳ ಅಳವಡಿಕೆ ಮಾಡುವ ಮೂಲಕ ದುಬಾರಿ ವೆಚ್ಚ ಹೇರುತ್ತಿವೆ. ಹಾಗಾಗಿ ವಿದ್ಯುತ್ ಖಾಸಗೀಕರಣಕ್ಕೆ ನಮ್ಮ ಪ್ರಬಲ ವಿರೋಧವಿದೆ.

ಸರ್ಕಾರ ಚುನಾವಣಾ ಪೂರ್ವದಲ್ಲಿ  ನೀಡಿದ್ದ ಭರವಸೆ ಒಂದನ್ನೂ ಈಡೇರಿಸಿಲ್ಲ. ಭೂಸ್ವಾಧೀನದ ವಿರುದ್ದ ಚೆನ್ನರಾಯಪಟ್ಟಣದ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ನೀಡಿದ್ದ ಭರವಸೆಗಳು ಈಡೇರಿಲ್ಲ. 

ಈ ಹಿಂದೆ ಹೊಸಕೋಟೆ ತಾಲೂಕಿನಲ್ಲಿ ಎಸ್.ಇ.ಜೆಡ್ ವಿಶೇಷ ವಲಯದ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಅದನ್ನು ಕೈಬಿಟ್ಟು ಈಗ ಉಪ ನಗರದ ಯೋಜನೆಯಡಿ ಹೆಸರು ಬದಲಾವಣೆ ಮಾಡಿ, ರೈತರ ಭೂಮಿ ಪಡೆಯಲಾಗುತ್ತದೆ. ಫಲವತ್ತಾದ ಕೃಷಿ ಭೂಮಿ ಸ್ವಾಧೀನವಿಲ್ಲ ಎಂದು ಹೇಳುತ್ತಾರೆ. ಆದರೆ ಶೇ.65 ರಿಂದ 70 ಭಾಗ ನೀರಾವರಿ ಭೂಮಿಯೇ ಇದೆ. ಭೂಮಿ ವಶ ಪಡಿಸಿಕೊಳ್ಳುವದರಲ್ಲಿ ಶೇ.35 ಭಾಗ ಜಮೀನು ರಸ್ತೆ, ವಿದ್ಯುತ್ ಗೆ ಕಳೆದುಹೋಗುತ್ತಿದೆ. ಇದರ ಬಗ್ಗೆ ನಮ್ಮ ವಿರೋಧವಿದೆ ಎಂದರು.

ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಸನ್ನ ಮಾತನಾಡಿ, ವಿದ್ಯುತ್ ಖಾಸಗೀಕರಣದ ಪ್ರಕ್ರಿಯೆಗಳು ಕ್ರಮೇಣ ಜರುಗುತ್ತಿದ್ದು, ಇದು ರೈತರಿಗೆ ಮಾರಕವಾಗಿದೆ. ಪವರ್ ಗ್ರಿಡ್‌ನಿಂದ ರೈತರ ಜಮೀನುಗಳಲ್ಲಿ ಹಾದು ಹೋಗುವ ಬೃಹತ್ ವಿದ್ಯುತ್ ಕಂಬಗಳು ರೈತರ ಕೃಷಿಗೆ ಸಂಚಕಾರ ತಂದಿವೆ. ಇದರಿಂದ ರೈತರ ಜಮೀನಿಗೆ ಬೆಲೆಯೂ ಸಿಗುವುದಿಲ್ಲ.

ಸರ್ಕಾರ 1:4 ದರದಲ್ಲಿ ಭೂಮಿ ಖರೀದಿ ಮಾಡಿ, ಆನಂತರ ವಿದ್ಯುತ್ ಲೈನ್‌ಗಳನ್ನು ಎಳೆಯಲಿ. ಇಲ್ಲವೇ ಅಂಡರ್ ಗ್ರೌಂಡ್ ಕೇಬಲ್‌ಗಳನ್ನು ಅಳವಡಿಸಲಿ. ಅದು ಬಿಟ್ಟು ರೈತರ ಜಮೀನುಗಳ ಮೇಲೆ ಅತಿಕ್ರಮಣ ಮಾಡುವುದು ಎಷ್ಟು ಸರಿ. ಕೈಗಾರಿಕೆಗಳಿಂದ ಜನಸಾಂದ್ರತೆ ಹೆಚ್ಚಾಗಿ ಜನರ ಜೀವನ ಕಷ್ಟವಾಗುತ್ತದೆ ಎಂದರು.

ಜಿಲ್ಲಾ ಕಾರ್ಯದರ್ಶಿ ಜಿಂಕೆಬಚ್ಚಹಳ್ಳಿ ಸತೀಶ್ ಮಾತನಾಡಿ, ಬಾಶೆಟ್ಟಿಹಳ್ಳಿಯಲ್ಲಿ ಅಪೇರೆಲ್ ಪಾರ್ಕ್ ಮೂರನೇ ಹಂತಕ್ಕೆ ವಶಪಡಿಸಿಕೊಂಡ ಜಮೀನಿನಲ್ಲಿ  ಬಹಳಷ್ಟು ಇನ್ನೂ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಆದರೆ ಸರ್ಕಾರ ಇದೀಗ ದೊಡ್ಡಬಳ್ಳಾಪುರದ ಸುತ್ತಮುತ್ತ ಕೈಗಾರಿಕೆಗಳಿಗೆ ಭೂಸ್ವಾಧೀನ ಮಾಡಿಕೊಳ್ಳುತ್ತಿದೆ. ದೊಡ್ಡಬಳ್ಳಾಪುರ ದಾಬಸ್ ಪೇಟೆ ನಡುವೆ ಸ್ಥಾಪನೆಯಾಗಲಿರುವ ಕೆ.ಎಚ್.ಐ.ಆರ್ ಸಿಟಿಗೆ 2 ಸಾವಿರ ಎಕರೆ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಆದರೆ ಸ್ಥಳೀಯರಿಗೆ ಕೆಲಸ ಮಾತ್ರ ಸಿಗುವುದಿಲ್ಲ. 

ಕೈಗಾರಿಕೆಗಳಿಂದ ಕೊಳಗೇರಿ ಆರಂಭವಾಗಿ, ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಅಂತರ್ಜಲ ಕಲುಷಿತ ಗೊಳ್ಳಲಿದೆ. ಕೃಷಿ ಬದುಕನ್ನು ಅಸ್ಥಿರಗೊಳಿಸುವ ಇಂತಹ ಯೋಜನೆಗಳನ್ನು ನಾವು ವಿರೋಧಿಸಬೇಕಿದ್ದು, ಸೆ.4 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಈ ವೇಳೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕು ಘಟಕದ ಅಧ್ಯಕ್ಷ ಹನುಮೇಗೌಡ, ಕಾರ್ಯದರ್ಶಿ ಆರ್.ಎಸ್.ಸತೀಶ್, ಮುಖಂಡರಾದ ಶಿರವಾರ ರವಿ, ದೇವನಹಳ್ಳಿ ತಾಲೂಕು ಕಾರ್ಯದರ್ಶಿ ರಮೇಶ್, ದೇವನಹಳ್ಳಿ ನಾರಾಯಣಸ್ವಾಮಿ ಮೊದಲಾದವರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

ಆ.31 ರಂದು “ಧರ್ಮಸ್ಥಳ ಸತ್ಯ ಯಾತ್ರೆ: ಜೆಡಿಎಸ್ ಕಾರ್ಯಕರ್ತರಿಗೆ ಬಿ.ಮುನೇಗೌಡ ಕರೆ

"ಧರ್ಮಸ್ಥಳ ಸತ್ಯ ಯಾತ್ರೆಗೆ" (Dharmasthala Satya Yatre) ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.

[ccc_my_favorite_select_button post_id="113258"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಿಗೆ ನಗದು ಪುರಸ್ಕಾರದ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಒಲಂಪಿಕ್ಸ್ , ಏಷ್ಯನ್ ಗೇಮ್ಸ್, ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಗೆದ್ದವರಿಗೆ 3 ಹಾಗೂ ಕಂಚು ಗೆದ್ದವರಿಗೆ 2 ಕೋಟಿ ರೂ.ಗಳ ಬಹುಮಾನ: Cmsiddaramaiah

[ccc_my_favorite_select_button post_id="113214"]
ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ!| Video ನೋಡಿ

ದೊಡ್ಡಬಳ್ಳಾಪುರ: ಗಣೇಶ ಚತುರ್ಥಿ ದಿನ ತಪ್ಪಿದ ಅನಾಹುತ.. ಟೋಲ್ ಸಂಸ್ಥೆ ವಿರುದ್ಧ ಸಾರ್ವಜನಿಕರ

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ಬದಿಯಲ್ಲಿನ ಚರಂಡಿ ನುಗ್ಗಿರುವ ಘಟನೆ ನಗರದ ಹೊರವಲಯದಲ್ಲಿನ Doddaballapura ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

[ccc_my_favorite_select_button post_id="113161"]
ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ಹಿಟ್ & ರನ್.. ವ್ಯಕ್ತಿ ಸಾವು..!

ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ (Hit & Run) ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವಿನ

[ccc_my_favorite_select_button post_id="113236"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!