ಮುಂಬೈ, (ಆಗಸ್ಟ್ 31): ಸಿಂಧುದುರ್ಗದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಿದ್ದಾರೆ.
ಮಹಾರಾಷ್ಟ್ರದ ಪಾಲ್ವರ್‌ನಲ್ಲಿ 76 ಸಾವಿರ ಕೋಟಿ ರೂಪಾಯಿ ವೆಚ್ಚದ ವಾಧವನ್ ಬಂದರು ಯೋಜನೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ನಾನು ನನ್ನ ಹೃದಯದ ಭಾವನೆಗಳನ್ನು ವ್ಯಕ್ತಪಡಿಸಲು ಬಯಸುತ್ತೇನೆ.
2013ರಲ್ಲಿ ಬಿಜೆಪಿ ನನ್ನನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದಾಗ ನಾನು ಮಾಡಿದ ಮೊದಲ ಕೆಲಸವೆಂದರೆ ರಾಯಗಢ ಕೋಟೆಗೆ ಹೋಗಿ ಛತ್ರಪತಿ ಶಿವಾಜಿ ಮಹಾರಾಜರ ಸಮಾಧಿಯ ಮುಂದೆ ಕುಳಿತು ಪ್ರಾರ್ಥಿಸಿ ಅವರ ಆಶೀರ್ವಾದ ಪಡೆದೆ ಎಂದರು.
ನನಗೆ ಮತ್ತು ನನ್ನ ಎಲ್ಲಾ ಸಹೋದ್ಯೋಗಿಗಳಿಗೆ ಛತ್ರಪತಿ ಶಿವಾಜಿ ಮಹಾರಾಜ್ ಎಂಬುದು ಕೇವಲ ಹೆಸರಲ್ಯ ಛತ್ರಪತಿ ಶಿವಾಜಿ ಮಹಾರಾಜರು ನಮ್ಮ ಆರಾಧ್ಯ ದೈವ. ಇಂದು ನಾನು ನನ್ನ ಪ್ರೀತಿಯ ದೇವರ ಪಾದಗಳಿಗೆ ತಲೆಬಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.
ಪ್ರತಿಮೆ ಕುಸಿತ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಆಗಸ್ಟ್ 26 ರಂದು ಛತ್ರಪತಿ ಶಿವಾಜಿ ಮಹಾರಾಜರ 35 ಅಡಿ ಎತ್ತರದ ಪ್ರತಿಮೆ ಬಿದ್ದ ನಂತರ ಬಿಜೆಪಿ ಸರ್ಕಾರದ ವಿರುದ್ಧ ಭಾರೀ ಟೀಕೆ ವ್ಯಕ್ತವಾಯಿತು. ವಿವಾದ ತಾರಕಕ್ಕೇರುತ್ತಿದ್ದಂತೆ ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಎನ್‌ಸಿಪಿ ನಾಯಕ ಅಜಿತ್ ಪವಾರ್ ಕ್ಷಮೆಯಾಚಿಸಿದ್ದಾರೆ. ಈ ಸಂಬಂಧ ಸಿಂಧುದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….