ದಾಬಸ್ಪೇಟೆ, (ಸೆ.01); ಕೆಲಸ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮಹಿಳೆ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಾರಿನಲ್ಲಿ ಬಂದ ಕಳ್ಳರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತ್ಯಾಮಗೊಂಡ್ಲು ಹೋಬಳಿಯ ತೋಟನಹಳ್ಳಿ ಗ್ರಾಮದ ಮಹಿಳೆ 29 ವರ್ಷದ ಉಷಾ ಅವರು ದಾಬಸ್ಪೇಟೆ ಕೈಗಾರಿಕಾ ಪ್ರದೇಶದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ಆ.30ರಂದು ಸಂಜೆ ಸುಮಾರು 5.15 ಗಂಟೆಯ ಸಮಯದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೋಟನಹಳ್ಳಿ ಗ್ರಾಮದ ರಸ್ತೆಯಲ್ಲಿ ಹೋಗುತ್ತಿದ್ದಾಗ ಅದೇ ರಸ್ತೆಯಲ್ಲಿ ಕಾರೊಂದು ಮುಂದೆ ಹೋಗಿದೆ, ಅದೇ ಕಾರು ಸ್ವಲ್ಪ ದೂರು ಹೋಗಿ ವಾಪಸ್ಸು ಬಂದು ನಡೆದುಕೊಂಡು ಬರುತ್ತಿದ್ದ ಉಷಾಳ ಕುತ್ತಿಗೆಗೆ ಕೈ ಹಾಕಿ ಸುಮಾರು 40 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಕಾರಿನಲ್ಲಿ ಪರಾರಿಯಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಡಿವೈಎಸ್ ಪಿ ಜಗದೀಶ್, ಇನ್ಸ್ ಪೆಕ್ಟರ್ರಂಜನ್ ಕುಮಾರ್ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….