ದೊಡ್ಡಬಳ್ಳಾಪುರ, (ಸೆ.01): ನಗರದ ವಿವಿಧೆಡೆಗಳಲ್ಲಿ ವಿದ್ಯುತ್ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.
ಈ ಕುರಿತು ಪ್ರಕಟಣೆ ನೀಡಿರುವ ಬೆಸ್ಕಾಂ ದೊಡ್ಡಬಳ್ಳಾಪುರ ನಗರ ಉಪವಿಭಾಗದ ಎಇಇ ವಿನಯ್ ಕುಮಾರ್ ಹೆಚ್.ಪಿ ಅವರು, 220/66/11KV KIADB ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುತ್ತಿರುವ ಕೆಲವು 11ಕೆವಿ ವಿದ್ಯುತ್ ಮಾರ್ಗಗಳಲ್ಲಿ ಹಳೆಯ/ಶಿಥಿಲವಾಗಿರುವ ಕಬ್ಬಿಣದ ಕಂಬಗಳನ್ನು ಬದಲಾಯಿಸುವ ಮತ್ತು ವಿದ್ಯುತ್ ಮಾರ್ಗಗಳ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ನಗರದ ಹಲವಾರು ಪ್ರದೇಶಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗುವುದರಿಂದ ಗ್ರಾಹಕರು ಸಹಕರಿಸಬೇಕೆಂದು ಕೋರಿದ್ದಾರೆ. (ಪ್ರದೇಶಗಳ ಮಾಹಿತಿ ನೀಡಿಲ್ಲ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….