ಮುಡಾ ಹಗರಣ: ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ ನಿರ್ಧಾರವಾಗಲಿದೆ: ಬಸವರಾಜ ಬೊಮ್ಮಾಯಿ

ಮಂಡ್ಯ, (ಸೆ.01); ಮುಡಾ ಹಗರಣದ ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಕೋರ್ಟ್ ಆದೇಶದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರೆಯುತ್ತಾರೆಯೋ ಇಲ್ಲವೋ ಎನ್ನುವುದು ತೀರ್ಮಾನ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಭಾನುವಾರ ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಒಂದು ಪ್ರಕರಣವನ್ನು ಪ್ರಾಷಿಕ್ಯೂಶನ್‌ಗೆ ಕೊಟ್ಟಿರುವುದು ಇದೇ ಮೊದಲ ಪ್ರಕರಣ ಅಲ್ಲ. ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳು ಆಗಿವೆ. ರಾಜ್ಯದಲ್ಲಿಯೂ ಆಗಿವೆ. ಇದೊಂದು ಸ್ಥಾಪಿತ ವ್ಯವಸ್ಥೆ ಆಗಿದೆ. ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ಇವೆ. 2018 ರಲ್ಲಿ ಒಂದು ತಿದ್ದುಪಡಿ ಆಗಿದೆ. ಅದರ ಆಧಾರದಲ್ಲಿ ಈಗ ಚರ್ಚೆಗೆ ಗ್ರಾಸವಾಗಿದೆ. ಸಂವಿಧಾನದ ಕಲಂ 17/2 ತಿದ್ದುಪಡಿ ಆದ ನಂತರ ಏನು ಬದಲಾವಣೆ ಆಗಿದೆ ಎನ್ನುವುದನ್ನು ಇಲ್ಲಿ ಒಂದು ಗಮನಿಸಬೇಕು.

ಕಾಂಗ್ರೆಸ್ ಮಿತ್ರರು ಯಾಕೆ ಅಷ್ಟೊಂದು ಆತಂಕಕ್ಕೆ ಒಳಗಾಗಿದ್ದಾರೊ ಗೊತ್ತಿಲ್ಲ. ರಾಜ್ಯಪಾಲರು ಒಂದು ತನಿಖೆ ನಡೆಸುವಂತೆ ಆದೇಶ ಮಾಡಿದ್ದಾರೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಹಾಗೆ ಆಗಿರಲಿಲ್ಲ. ತನಿಖೆ ಅಂತ ಇರಲಿಲ್ಲ. ಪ್ರಾಶಿಕ್ಯೂಷನ್ ಮಾಡಿ ಅಂಥ ಹೇಳಿದ್ದರು. ಎಫ್‌ಐಆರ್ ಆಗಿ ತನಿಖೆಯಾಗಿ, ಚಾರ್ಜ್‌ ಶೀಟ್ ಆದ ನಂತರ ಪ್ರಾಶಿಕ್ಯೂಷನ್ ಮಾಡಲಾಗುತ್ತದೆ. ಅದು ಯಾವುದನ್ನೂ ಮಾಡದೇ ನೇರವಾಗಿ ಸೆಸನ್ಸ್ ಕೋರ್ಟ್‌ಗೆ ಸಮನ್ಸ್ ಮಾಡುವ ಅಧಿಕಾರವನ್ನು ನೀಡಲಾಗಿತ್ತು. ಅವತ್ತಿನ ಗೌರ್ನರ್ ಆದೇಶದ ಬಗ್ಗೆ ಹಲವಾರು ಕೋರ್ಟ್‌ಗಳಲ್ಲಿ ಟೀಕೆ ಟಿಪ್ಪಣಿ ಆಗಿ, ಆದೇಶಗಳೂ ಆಗಿವೆ. ಇವತ್ತು ರಾಜ್ಯಪಾಲರು ಕೇವಲ ತನಿಖೆ ನಡೆಸಲು ಹೇಳಿದ್ದಾರೆ. ಕೋರ್ಟ್‌ನಲ್ಲಿ ನಡೆಯುತ್ತಿದೆ. ಅಂತಿಮ ಘಟಕ್ಕೆ ಬಂದಿದೆ. ಏನಾಗುತ್ತದೆಯೋ ಕಾದು ನೋಡೋನ ಎಂದರು.

ಕಾಂಗ್ರೆಸ್‌ನವರು ಬಿಜೆಪಿ ನಾಯಕರ ವಿರುದ್ಧ ಪ್ರಾಶಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರನ್ನು ಭೇಟಿ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ರಾಜ್ಯಪಾಲರು ಉತ್ತರ ಕೊಟ್ಟಿದ್ದಾರೆ. ಕೆಲವು ಮಾಹಿತಿ ಕೇಳಿದ್ದೇನೆ ಎಂದು ಹೇಳಿದ್ದಾರೆ. ಅದು ಏನೇ ಇರಲಿ, ಆ ಪ್ರಕರಣಗಳಿಗೂ, ಸಿದ್ದರಾಮಯ್ಯ ಅವರ ಪ್ರಕರಣಕ್ಕೂ ತಳಕು ಹಾಕುವ ಕೆಲಸ ಮಾಡಬಾರದು. ಇದು ರಾಜ್ಯದ ಮುಖ್ಯಸ್ಥನ ಮೇಲೆ ಇರುವ ಪ್ರಕರಣ ಆಗಿರುವುದರಿಂದ ಹೆಚ್ಚಿನ ಆದ್ಯತೆ ದೊರೆಯುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮ್ಯಯ ರಾಜೀನಾಮೆ ಕೊಡುತ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೋರ್ಟ್‌ನ ತೀರ್ಮಾನದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದುವರೆಯುವ ಬಗ್ಗೆ ತೀರ್ಮಾನ ಆಗಲಿದೆ. ರಾಜಕೀಯವಾಗಿ ಏನೇ ವಿಶ್ಲೇಷಣೆ ಮಾಡಿದರೂ, ಪ್ರಕರಣ ಕೋರ್ಟ್‌ಗೆ ಹೋಗಿರುವುದರಿಂದ ಕೋರ್ಟ್ ಆದೇಶದ ಮೇಲೆ ಅವರ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು. ಯಾವುದೇ ರೀತಿಯ ಆಧಾರ ಇಲ್ಲದೇ,ತಮ್ಮನ್ನು ತಾವು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ರಾಜಕೀಯ ಆರೋಪ ಬಂದಾಗ ಈ ರೀತಿ ಮಾಡುವುದು ಸಹಜ. ಇದೇನು ಹೊಸದಲ್ಲ. ಹಳೆಯ ತಂತ್ರಗಳು ಎಂದು ಹೇಳಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೊವಿಡ್ ಹಗರಣದ ಕುರಿತು ಪ್ರತಿಕ್ರಿಯಿಸಿದ ಅವರು. ಈ ಸರ್ಕಾರ ಕೊವಿಡ್ ವಿಚಾರದಲ್ಲಿ ತನಿಖೆ ನಡೆಸಲು ಆಯೋಗ ರಚನೆ ಮಾಡಿದ್ದರು. ಆ ಆಯೋಗ ಸಿಎಂಗೆ ವರದಿ ಸಲ್ಲಿಸಿದೆ. ಅದರಲ್ಲಿ ಏನಿದೆಯೋ ಗೊತ್ತಿಲ್ಲ. ಎಲ್ಲವೂ ಹೊರಗೆ ಬರಲಿ ಅದಕ್ಕೆ ಉತ್ತರ ಕೊಡುತ್ತೇವೆ. ನಮ್ಮ ಕಾಲದ ಹಗರಣದ ಕುರಿತು ತನಿಖೆ ನಡೆಸಲು ಯಾವುದೇ ಅಡ್ಡಿಯಿಲ್ಲ. ಯಾರು ರಾಜಕೀಯವಾಗಿ ಆರೋಪ ಮಾಡಿ ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಅವರಿಗೂ ಶಿಕ್ಷೆಯಾಗಲಿ ಎಂದರು.

ವರಿಷ್ಠರ ತೀರ್ಮಾನ: ಚನ್ನಪಟ್ಟಣ ಉಪಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚನ್ನಪಟ್ಟಣ ಉಪ ಚುನಾವಣೆ ಕುರಿತು ಮಾಜಿ ಮುಖ್ಯಮಂತಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದ್ದೇವೆ.

ಅವರು ತಮ್ಮ ಪಕ್ಷದ ಪಮುಖರ ಜೊತೆಗೆ ಚರ್ಚೆ ಮಾಡುತ್ತಾರೆ. ಹಾಗೂ ಎನ್‌ಡಿಎ ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಬಿಜೆಪಿ ವರಿಷ್ಠರು ಹಾಗೂ ಕುಮಾರಸ್ವಾಮಿ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]