ಬಜಪೆ, (ಸೆ.03); ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ವ್ಯಕ್ತಿಯೋರ್ವ ಸಾವನಪ್ಪಿರುವ ದಾರುಣ ಘಟನೆ ಬಜಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮೃತ ದುರ್ದೈವಿಯನ್ನು 31 ವರ್ಷದ ಆನಂದ್ ಪೂಜಾರಿ ಎಂದು ಗುರುತಿಸಲಾಗಿದೆ.
ಕಾಯರಾಣೆಯಲ್ಲಿ ಕ್ರಿಕೆಟ್ ಆಡುತ್ತಿರುವ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು.
ಅಲ್ಲಿ ಆನಂದ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಆನಂದ್ ಪೂಜಾರಿಯವರು 2012 ರಲ್ಲಿ ಮೂಡುಪೆರಾರ ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿ ಕೆಲಸಕ್ಕೆ ಸೇರಿದ್ದರು. ಅಲ್ಲದೇ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘ ಇದರ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….