ನೆಲಮಂಗಲ, (ಸೆ.03): ಡಾಬಾ ಬಳಿ ವಾಹನ ನಿಲ್ಲಿಸುವ ವಿಚಾರವಾಗಿ ನಡೆದ ಗಲಾಟೆ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಗ್ರಾಸ್ ಬಳಿ ನಡೆದಿದೆ.
ಗ್ರೀನ್ ಪಾರ್ಕ್ ಡಾಬಾ ಬಳಿ ವಾಹನ ನಿಲ್ಲಿಸುವ ವಿಚಾರವಾಗಿ ಗಲಾಟೆ ಪ್ರಾರಂಭವಾಗಿದೆ. ಈ ವೇಳೆ 29 ವರ್ಷದ ಪ್ರದೀಪ್ ಎಂಬುವವರ ಮೇಲೆ ಮಹೇಶ್ ಎಂಬ ವ್ಯಕ್ತಿ ಜ್ಯಾಕ್ ರಾಡ್ನಿಂದ ತಲೆಗೆ ಹೊಡೆದಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಮೃತ ಪ್ರದೀಪ್ ಬೆಂಗಳೂರು ಉತ್ತರ ತಾಲೂಕಿನ ಶ್ಯಾನಭೋಗನಹಳ್ಳಿ ನಿವಾಸಿ ಎನ್ನಲಾಗಿದೆ. ಘಟನೆ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಸಿಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಮಹೇಶ್, ಆತನ ಜೊತೆಯಲ್ಲಿದ್ದ ಬೋರಲಿಂಗ ಮತ್ತು ಸುನೀಲ್ ರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….