ಚಿಕ್ಕಬಳ್ಳಾಪುರ, (ಸೆ.03); ಕೋವಿಡ್ ಹಗರಣದ ಸಂಪೂರ್ಣ ರಾಜಕೀಯ ಷಡ್ಯಂತ್ರವಾಗಿದ್ದು, ಸಚಿವ ಎಂ.ಬಿ.ಪಾಟೀಲ್ ಸ್ವಲ್ಪ ತಿಳುವಳಿಕೆಯಿಂದ ಮಾತಾಡಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ತನಿಖಾ ವರದಿ ಯಲ್ಲಿ ನನ್ನ ಹೆಸರನ್ನು ಉಲ್ಲೇಖಿಸಿದ್ದಾರೆಯೇ ಎಂದು ನೋಡಬೇಕು. ಸಚಿವ ಎಂ.ಬಿ.ಪಾಟೀಲ್ ಅವರು ಸಂಸ್ಕಾರವಂತರು ಹಾಗೂ ವಿದ್ಯಾವಂತರೆಂದು ತಿಳಿದಿದ್ದೇನೆ. ಕೈಗಾರಿಕಾ ಇಲಾಖೆಯಲ್ಲಿ ನಡೆದ ಎಲ್ಲ ಅಕ್ರಮಕ್ಕೆ ಎಂ.ಬಿ. ಪಾಟೀಲ್ ಅವರೇ ಹೊಣೆ ಎನ್ನಬೇಕೆ? ರೈಲ್ವೆ ಅಪಘಾತ ವಾದರೆ ಅದಕ್ಕೆ ಸಂಪೂರ್ಣ ರೈಲ್ವೆ ಸಚಿವರೇ ಕಾರಣ ವಾಗುತ್ತಾರಾ? ಎಂದು ಪ್ರಶ್ನಿಸಿದರು.
ಒಬ್ಬ ಸಚಿವ ಕೋವಿಡ್ ನಿರ್ವಹಣೆ ಮಾಡಿಲ್ಲ. ಬದಲಾಗಿ ಇಡೀ ಸರ್ಕಾರ ಮಾಡಿದೆ ಎಂದು ಹೇಳಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….