ದೊಡ್ಡಬಳ್ಳಾಪುರ, (ಸೆ.03): ನಗರಸಭೆ ವ್ಯಾಪ್ತಿಯಲ್ಲಿ ಗೌರಿ ಗಣೇಶ್ ಹಬ್ಬದ ಅಂಗವಾಗಿ ಸಾರ್ವಜನಿಕವಾಗಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಪೊಲೀಸ್,ಬೆಸ್ಕಾಂ ಸೇರಿದಂತೆ ಎಲ್ಲಾ ಇಲಾಖೆಗಳ ಅನುಮತಿಯನ್ನು ಒಂದೇ ಸೂರಿನಡಿ ವಿತರಿಸಲು ಏಕಗವಾಕ್ಷಿಯನ್ನು ತೆರೆಯಲಾಗಿದೆ ಎಂದು ನಗರಸಭೆ ಪೌರಾಯುಕ್ತ ಕಾರ್ತಿಕ್ ಈಶ್ವರ್ ಹೇಳಿದರು.
ನಗರಸಭೆ ಕಾರ್ಯಾಲಯದಲ್ಲಿ ಮಂಗಳವಾರ ಅನುಮತಿ ಪತ್ರ ವಿತರಣೆಗೆ ಚಾಲನೆ ನೀಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸುವವರು ವಾಹನಗಳ ಒಡಾಟ ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು.
ಇದಲ್ಲದೆ ಪರಿಸರಕ್ಕೆ ಹಾನಿಯಾಗುವಂತಹ ರಾಸಾಯನಿಕ ಬಣ್ಣದ ಮೂರ್ತಿಗಳು, ಪಿಒಪಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು. ಅನುಮತಿ ಪಡೆಯಲು ಆಧಾರ್ ಕಾರ್ಡ್, ಒಪ್ಪಿಗೆ ಪತ್ರ ಮತ್ತು ಮೂರ್ತಿ ಪ್ರತಿಷ್ಠಾಪಿಸುವ ಸ್ಥಳದಲ್ಲಿ ಮಾಹಿತಿ ನೀಡಬೇಕು. ಬೆಳಿಗ್ಗೆ 10.30 ರಿಂದ ಸಂಜೆ 5.30 ರವರೆಗೂ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅನುಮತಿ ಪಡೆಯಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಪರಿಸರ ವಿಭಾಗದ ಎಂಜಿನಿಯರ್ ಈರಣ್ಣ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….