ದೊಡ್ಡಬಳ್ಳಾಪುರ, (ಸೆ.04); ನಗರದ ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಎಚ್.ಎನ್.ಪ್ರಕಾಶ್ ಅವರಿಗೆ 2024-25 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.
1989ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಶಿಕ್ಷಕ ವೃತ್ತಿ ಆರಂಭಿಸಿದ ಎಚ್.ಎನ್.ಪ್ರಕಾಶ್, ನಂತರ ಶಿಕ್ಷಣ ಇಲಾಖೆಯಲ್ಲಿ 6 ವರ್ಷಗಳ ಕಾಲ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ಸಿ.ಆರ್.ಪಿ ಮತ್ತು ಬಿಆರ್‌ಪಿ ಕರ್ತವ್ಯಗಳ ಕುರಿತಾಗಿ ಪುಸ್ತಕ ರಚನೆ ಹಾಗೂ ಚಿಣ್ಣರ ಕರ್ನಾಟಕ ದರ್ಶನ ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿದ್ದರು.
ಶಿಕ್ಷಣ ಇಲಾಖೆಯ ಸೂಕ್ಷ್ಮಯೋಜನೆ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಪ್ರಧಾನ ಕಾರ್‍ಯದರ್ಶಿಯಾಗಿ ಕಾರ್‍ಯ ನಿರ್ವಹಿಸಿದ್ದಾರೆ.
ಪ್ರಸ್ತುತ ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ಉತ್ತಮ ಶಿಕ್ಷಕ ಎಂದು ವಿದ್ಯಾರ್ಥಿಗಳಿಗೆ ಪ್ರೀತಿಗೆ ಪಾತ್ರರಾಗಿದ್ದಾರೆ.
ನಾಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….