ಚೆನ್ನೈ, (ಸೆ.04); ಬೆಂಗಳೂರಿನ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಸಂಬಂಧ ತಾವು ಈ ಹಿಂದೆ ನೀಡಿದ್ದ ವಿವಾದಾತ್ಮಕ ಹೇಳಿಕೆ ಸಂಬಂಧ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಮತ್ತೊಮ್ಮೆ ತಮಿಳುನಾಡಿನ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.
ಈ ಕುರಿತು ಮದ್ರಾಸ್ ಹೈಕೋರ್ಟ್‌ಗೆ ಮಂಗಳವಾರ ಅಫಿಡವಿಟ್ ಸಲ್ಲಿಸಿರುವ ಶೋಭಾ ಕರಂದ್ಲಾಜೆ, ನಾನು ತಮಿಳುನಾಡಿನ ಸಂಸ್ಕೃತಿ ಮತ್ತು ಜನರ ಬಗ್ಗೆ ನನಗೆ ಗೌರವವಿದೆ. ಈಗಾಗಲೇ ನಾನು ಕ್ಷಮೆಯಾಚಿಸಿದ್ದೇನೆ. ಆದರೂ ಮತ್ತೊಮ್ಮೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.
ಕಳೆದ ಮಾರ್ಚದ 1 ರಂದು ಬೆಂಗಳೂರಿನ ಖಾಸಗಿ ಕೆಫೆಯಲ್ಲಿ ಸ್ಪೋಟಗೊಂಡ ಬಾಂಬ್ ತಮಿಳುನಾಡಿನವರೇ ಬಂದು ಇಟ್ಟು ಹೋಗಿದ್ದಾರೆ ಎಂಬ ಹೇಳಿಕೆಯನ್ನು ಕರಂದ್ಲಾಜೆ ನೀಡಿದ್ದರು.
ಈ ಕುರಿತು ಮಧುರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….