ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 04:- ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಹಾಗೂ ಪ್ರೋತ್ಸಾಹಧನ ಕಾರ್ಯಕ್ರಮಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಹಾಗೂ ಯಾವುದೇ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದಿಂದ ವಂಚಿತರಾಗದಂತೆ ಮಾಡಲು ಸೆಪ್ಟೆಂಬರ್ 2024 ರಿಂದ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹ ಧನಕ್ಕಾಗಿ ವೆಬ್ ಸೈಟ್: www.Sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.217, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ದೂರವಾಣಿ:080-29787447/9480843020, ಸಹಾಯಕ ನಿರ್ದೇಶಕರ ಕಚೇರಿ ದೂ.ಸಂ: ದೇವನಹಳ್ಳಿ ತಾಲ್ಲೂಕು ದೂ.ಸಂ:27681784. ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ: 27623681. ಹೊಸಕೋಟೆ ತಾಲ್ಲೂಕು ದೂ.ಸಂ:27931528. ನೆಲಮಂಗಲ ತಾಲ್ಲೂಕು ದೂ.ಸಂ:27723172. ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರ್ರಾಲಮಾಂತರ ಜಿಲ್ಲಾ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….