ಕೊರಟಗೆರೆ, (ಸೆ.05); ಗೌರಿಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಯುವಕರಿಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ತಾಲೂಕಿನ ತಂಗನಹಳ್ಳಿ ಬಳಿ ನಡೆದಿದೆ.
ಮಡಕಶಿರಾ ತಾಲೂಕಿನ ಅಗಳಿ ಗ್ರಾಮದ ಮಹೇಶ್ ಹಾಗೂ ನಾಗೇಶ್ ಮೃತಪಟ್ಟ ಯುವಕರು.
ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಮಹೇಶ್ ಹಾಗೂ ನಾಗೇಶ್ ಗೌರಿಗಣೇಶ ಹಬ್ಬದ ನಿಮಿತ್ತ ರಾತ್ರಿ ಸ್ವಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ತಂಗನಹಳ್ಳಿ ಬಳಿ ಆಯಾ ತಪ್ಪಿ ರಸ್ತೆ ಬದಿಯ ಮನೆಯೊಂದಕ್ಕೆ ಡಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರವಾದ ಪೆಟ್ಟುಬಿದ್ದ ಪರಿಣಾಮ ತೀವ್ರ ರಕ್ತಸ್ರಾವದಿಂದ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….