ದೊಡ್ಡಬೆಳವಂಗಲದಲ್ಲಿ ಪೊಲೀಸರ ಪಥ ಸಂಚಲನ: ಶಾಂತಿ, ಸುವ್ಯವಸ್ಥೆ ಕಾಪಾಡುವಂತೆ ಇನ್ಸ್ಪೆಕ್ಟರ್ ಡಾ‌.ಎಂಬಿ ನವೀನ್ ಕುಮಾರ್ ಕರೆ| ವಿಡಿಯೋ

ದೊಡ್ಡಬಳ್ಳಾಪುರ, (ಸೆ.05); ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಅಂಗವಾಗಿ ದೊಡ್ಡಬೆಳವಂಗಲ ಠಾಣೆ ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. 

ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯ ಮೇರೆಗೆ ದೊಡ್ಡಬೆಳವಂಗಲ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥ ಸಂಚಲನ ನಡೆಯಿತು.

ಈ ವೇಳೆ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಶಾಂತಿ, ಸುವ್ಯವಸ್ಥೆ ಕಾಪಾಡುವಂತೆ ನವೀನ್ ಕುಮಾರ್ ಜಾಗೃತಿ ಮೂಡಿಸಿದರು.

ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮೀ, ಎಎಸ್‌ಐ ಬಸವರಾಜು, ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಸಿಬ್ಬಂದಿಗಳು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!