ರಾಯಚೂರು, (ಸೆ.05); ಶಿಕ್ಷಕರ ದಿನಾಚರಣೆ ಸಂಭ್ರಮದ ದಿನವೇ ಖಾಸಗಿ ಶಾಲಾ ಬಸ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಇಂದು ಬೆಳಗ್ಗೆ ಮಾನವಿ ತಾಲೂಕಿನ ಕಪಗಲ್ ಗ್ರಾಮದ ಹಳ್ಳದ ಬಳಿ ಸಂಭವಿಸಿದೆ.
ಘಟನೆಯಲ್ಲಿ ಮೂರರಿಂದ ನಾಲ್ಕು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಮಾನವಿ ಪಟ್ಟಣದ ಖಾಸಗಿ ಶಾಲೆಯ ಬಸ್ ಮಾನವಿ ಕಡೆ ಹೊರಟಿದ್ದು, ಮಾನವಿ ಪಟ್ಟಣದಿಂದ ರಾಯಚೂರು ಕಡೆಗೆ ಸರ್ಕಾರಿ ಬಸ್ ಸಂಚರಿಸುತ್ತಿತ್ತು. ಈ ವೇಳೆ ಕಪಗಲ್ ಗ್ರಾಮದ ಹಳ್ಳದ ಬಳಿ ಎರಡೂ ಬಸ್ಗಳು ಪರಸ್ಪರ ಡಿಕ್ಕಿ ಹೊಡೆದಿವೆ.
ಘಟನೆಯಲ್ಲಿ ಶಾಲಾ ಬಸ್‌ನಲ್ಲಿದ್ದ ನಾಲ್ಕು ವಿದ್ಯಾರ್ಥಿಗಳ ಕೈ, ಕಾಲು ತುಂಡಾಗಿದೆ ಎನ್ನಲಾಗುತ್ತಿದೆ.
ಕೂಡಲೇ ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾನವಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….