ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಸೆಪ್ಟೆಂಬರ್ 5); ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ  ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 

ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು ಎಂದರು. 

ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿ ಎಂದರು. 

ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತಿ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದರು.

ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಮಾತ್ರ ಅವರಿಗೆ ಸಮಾಜ ಅರ್ಥ ಆಗುತ್ತದೆ. ಸಮಾಜದ ಸಮಸ್ಯೆಗಳಿಗೆ ಪರಿಹಾರ ರೂಪಿಸುತ್ತಾರೆ ಎಂದರು.

ವಿಜ್ಞಾನ ಓದಿರುವ ವಿದ್ಯಾರ್ಥಿಗಳೂ ಮೌಡ್ಯಕ್ಕೆ ಜೋತು ಬೀಳುವುದು, ಜಾತಿ ತಾರತಮ್ಯ ಮಾಡುವುದಾದರೆ ಅವರಿಗೆ ಸಿಕ್ಕ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳನ್ನು ವೈಚಾರಿಕವಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣದ್ದಾಗಿದೆ ಎಂದರು.

ಎಲ್ಲರಿಗೂ ಶಿಕ್ಷಣ ದೊರಕದಂತೆ ತಡೆಯುತ್ತಿದ್ದ ಕಾಲ ಈಗ ಇಲ್ಲ. ಈಗ ಪ್ರತಿಯೊಬ್ಬರಿಗೂ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಕಡ್ಡಾಯ ಶಿಕ್ಷಣದ ಜೊತೆಗೆ ಅತ್ಯುತ್ತಮ ವ್ಯಕ್ತಿತ್ವಗಳನ್ನು ರೂಪಿಸುವ ರೂವಾರಿಗಳು ನಮ್ಮ ಶಿಕ್ಷಕರು ಎಂದು ಮೆಚ್ಚುಗೆ ಸೂಚಿಸಿದರು. 

ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಶಿಕ್ಷಕರಿಂದ, ಶಿಕ್ಷಣದಿಂದ ಮಾತ್ರ ಸಾಧ್ಯ. 800 ವರ್ಷಗಳ ಹಿಂದೆಯೇ ಕರ್ಮ ಸಿದ್ಧಾಂತವನ್ನು ಬಸವಾದಿ ಶರಣರು ತಿರಸ್ಕರಿಸಿದ್ದರು. ಆದರೂ ಇವತ್ತಿನ ಶಿಕ್ಷಕರೂ ಹಣೆಬರಹ  ಮುಂತಾದ ಕರ್ಮಸಿದ್ಧಾಂತವನ್ನು ನಂಬುತ್ತಾರೆ. ಇದು ಸರಿಯಲ್ಲ. 

ಸಾವಿತ್ರಿ ಬಾಯಿ ಫುಲೆ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಲಿ ಎಂದು ಹಾರೈಸುತ್ತೇನೆ ಎಂದರು. 

ಶಿಕ್ಷಕರ ಸಮಸ್ಯೆಗಳನ್ನು ಶಿಕ್ಷಕರ ಸಂಘದ ಜೊತೆ ಸೇರಿ ಸುದೀರ್ಘವಾಗಿ ಚರ್ಚಿಸಿದ್ದೇನೆ. ಪದವಿಪೂರ್ವ ಶಿಕ್ಷಕರ ಸಮಸ್ಯೆಗಳು ಅರ್ಥವಾಗಿದೆ. ಇವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. 

ಪ್ರಾಥಮಿಕ‌ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು, ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು, ಶಿಕ್ಷಕರ‌ ಮತ್ತು ಉಪನ್ಯಾಸಕರ ಸಂಘಟನೆಗಳ ಪದಾಧಿಕಾತಿಗಳು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]