ಹಾಡಹಗಲೇ ರಸ್ತೆಯಲ್ಲಿ ಅತ್ಯಾಚಾರ, ರಕ್ಷಿಸುವ ಬದಲು ವಿಡಿಯೋ ಮಾಡಿದ ಜನ..!

ಉಜ್ಜಯಿನಿ, (ಸೆ.06): ಜನನಿಬಿಡ ರಸ್ತೆಯಲ್ಲಿ ಹಾಡಹಗಲೇ ಭಿಕ್ಷುಕಿ ಮೇಲೆ ಕುಡುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.

ನಗರದ ಅತ್ಯಂತ ಚಟುವಟಿಕೆಯ ಪ್ರದೇಶಗಳಲ್ಲಿ ಒಂದಾದ ಕೋಯ್ಲಾ ಪಾಠಕ್ ಸ್ಥಳದಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಆರೋಪಿಯನ್ನು ಲೋಕೇಶ್ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಆದರೆ ದುರಂತವೆಂದರೆ ಸ್ಥಳದಲ್ಲಿದ್ದ ಜನ ಮಧ್ಯಪ್ರವೇಶಿಸಿ ಕುಡುಕನಿಂದ ಆಕೆಯನ್ನು ಕಾಪಾಡುವ ಬದಲು, ಹೇಯ ಕೃತ್ಯದ ವಿಡಿಯೋವನ್ನು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆಂದು ವರದಿಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….