ದರ್ಶನ್ ಆಯ್ತು ಈಗ ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್

ಬೆಂಗಳೂರು, (ಸೆ.06); ದಕ್ಷಿಣ ಭಾರತದ ಚಿತ್ರರಂಗ ಇಡೀ ಪ್ರಪಂಚದಲ್ಲಿಯೇ ಸದ್ದು ಮಾಡುವಂತ ಸಿನಿಮಾಗಳನ್ನು ನೀಡಿ ಬಾಲಿವುಡ್ ಬಾಯಿಯ ಮೇಲೆ ಬೆರಳಿಟ್ಟುಕೊಳ್ಳುವಂತೆ ಮಾಡಿರುವ ಬೆನ್ನಲ್ಲೇ, ಒಂದಿಲ್ಲೊಂದು ಸಂಕಷ್ಟದ ದಿನಗಳು ಕಾಡುತ್ತಿದೆ‌.

ಕೆರಳದಲ್ಲಿ ಕಾಸ್ಟಿಂಗ್ ಕೌಚ್ ಸದ್ದು ಮಾಡುತ್ತಿದ್ದರೆ, 200 ಹೆಚ್ಚು ಮಹಿಳೆಯರಿಗೆ ಅಶ್ಲೀಲ ಸಂದೇಶ ಕಳಿಸದ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ಕರ್ನಾಟಕದಲ್ಲಿ ಖ್ಯಾತ ನಟ ದರ್ಶನ್ ನ್ಯಾಯಾಂಗ ಬಂಧನ ಬೆನ್ನಲ್ಲೇ ಈಗ ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಮೋಹನ್ ಕುಮಾರ್ (30) ಮೃತ ಲೈಟ್ ಬಾಯ್. ಸೆ.3ರಂದು ಮಾದನಾಯಕನಹಳ್ಳಿ ಸಮೀಪದ ವಿಆರ್‌ಎಲ್ ಅರೇನಾ ಬಳಿ ಚಿತ್ರೀಕರಣ ನಡೆಯುತ್ತಿತ್ತು. ಆ ವೇಳೆ ಅವಘಡ ಸಂಭವಿಸಿದೆ. 

ಮೃತ ಮೋಹನ್ ಹಾಗೂ ಅವರ ಸಹೋದರ ಬೆಂಗಳೂರು ನಗರದ ಬಡಾವಣೆಯೊಂದರಲ್ಲಿ ನೆಲೆಸಿದ್ದರು. ಚಿತ್ರರಂಗದಲ್ಲಿ ಇಬ್ಬರೂ ಲೈಟ್ ಬಾಯ್‌ಗಳಾಗಿ ಕೆಲಸ ಮಾಡುತ್ತಿದ್ದರು. ಸೆ.3ರಂದು ಚಿತ್ರೀಕರಣದ ವೇಳೆ ಮೋಹನ್ 30 ಅಡಿ ಎತ್ತರದ ಏಣಿಯಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ.

ಅವನನ್ನು ಗೊರಗುಂಟೆ ಪಾಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾನೆ. ಚಿತ್ರೀಕರಣದ ವೇಳೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ ಆರೋಪ ಅಡಿ ಚಿತ್ರ ನಿರ್ದೇಶಕ ಯೋಗರಾಜ್ ಭಟ್ ಹಾಗೂ ವ್ಯವಸ್ಥಾಪಕ ಸುರೇಶ್ ಸೇರಿ ಮೂವರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….