ಎಂಡರಶಾ, (ಸೆ.06); ಕೀನ್ಯಾದ ಎಂಡರಶಾ, ಕಿಯೆನಿ ಸಬ್ ಕೌಂಟಿಯಲ್ಲಿನ ಹಿಲ್‌ಸೈಡ್ ಖಾಸಗಿ ಮಿಶ್ರ ಪ್ರಾಥಮಿಕ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 15 ಮಕ್ಕಳು ಸಾವನ್ನಪ್ಪಿದ್ದು, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದ.
ಹಿಲ್‌ಸೈಡ್ ಎಂಡರಶಾ ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಗಾಯಾಳುಗಳನ್ನು ಮಥರಿ ಮಿಷನ್ ಆಸ್ಪತ್ರೆ ಮತ್ತು ನೈರಿ ಕೌಂಟಿ ರೆಫರಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಕೀನ್ಯಾ ರೆಡ್‌ಕ್ರಾಸ್ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೀಡಿತ ಕುಟುಂಬಗಳಿಗೆ ಮಾನಸಿಕ ಸಾಮಾಜಿಕ ಬೆಂಬಲ ಸೇವೆಗಳನ್ನು ಒದಗಿಸುತ್ತಿದೆ ಮತ್ತು ಶಾಲೆಯಲ್ಲಿ ಟ್ರೇಸಿಂಗ್ ಡೆಸ್ಕ್ ಅನ್ನು ಸ್ಥಾಪಿಸಿದೆ ಎಂದು ಅಲ್ಲಿನ ಸರ್ಕಾರ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….