ಬೆಂಗಳೂರು, (ಸೆ.06): ಕನ್ನಡ ಚಿತ್ರರಂಗದ ನಟ, ನಿರ್ದೇಶಕ ನಾಗಶೇಖರ್ ಅವರ ಕಾರು ಅಪಘಾತಕ್ಕೆ ಒಳಗಾಗಿದ್ದು, ಓರ್ವ ಮಹಿಳೆ ಗಾಯಗೊಂಡಿರುವ ಘಟನೆ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಸಂಭವಿಸಿದೆ.
ಕೆಲಸ ನಿಮಿತ್ತ ನಾಗಶೇಖರ್ ಅವರು ಬೆಂಜ್ ಕಾರಿನಲ್ಲಿ ಹೋಗುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು ಮಾಹಿತಿ ತಿಳಿದು ಸ್ಥಳಕ್ಕೆ ಜ್ಞಾನ ಭಾರತಿ ಕ್ಯಾಂಪಸ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ನಾಗಶೇಖರ್ ಅವರು ಮಾಸ್ತಿಗುಡಿ, ಸಂಜು ವೆಡ್ಸ್ ಗೀತಾ, ಅಮರ್, ಮೈನಾ, ಶ್ರೀಕೃಷ್ಣ ಎಟ್ ಜೀಮೇಲ್ ಡಾಟ್ ಕಾಮ್ ಸಿನಿಮಾ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.
ಪ್ರಸ್ತುತ ನಾಗಶೇಖರ್ ಅವರು ಸಂಜು ವೆಡ್ಸ್ ಗೀತಾ-2 ಶೂಟಿಂಗ್ ಮುಗಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….