ಕೊಪ್ಪಳ, (ಸೆ.07): ಗಣೇಶ ಚತುರ್ಥಿಯ ಪ್ರಯುಕ್ತ ಗ್ರಾಮಕ್ಕೆ ಟ್ಯಾಕ್ಟರ್ ಮೂಲಕ ಗಣಪನ ಮೂರ್ತಿ ಸಾಗಿಸುತ್ತಿದ್ದ ವೇಳೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದ ಕೋಳೂರು ಕ್ರಾಸ್ ಬಳಿ ನಡೆದಿದೆ.
ಇಂದು ಬೆಳಗ್ಗೆ ಕೊಪ್ಪಳ ನಗರದಿಂದ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮಕ್ಕೆ ಹೋಗುವಾಗ ತಾಲೂಕಿನ ಕೋಳೂರು ಕ್ರಾಸ್ ಬಳಿ ಈ ಘಟನೆ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ಯಾಕ್ಟರ್ ಗೆ ಹಿಂಬದಿಯಿಂದ ಲಾರಿ ಬಂದು ಗುದ್ದಿದ ಪರಿಣಾಮ ಗಣೇಶನ ಮೂರ್ತಿನೆಲಕ್ಕುರುಳಿದೆ.
ಘಟನೆ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….