ಬೆಂಗಳೂರು, (ಸೆ.07): ಗೌರಿ ಹಬ್ಬದ ಸಂಭ್ರಮ ದಿನ ದಂದೇ ರಾಜ್ಯದ ಹಲವು ಕಡೆ ರಸ್ತೆ ಅಪ ಘಾತಗಳು ಸಂಭವಿಸಿದ್ದು, ಒಟ್ಟು 13 ಜನರು ಮೃತಪಟ್ಟಿದ್ದಾರೆ.
ವಿಜಯಪುರ, ಬಾಗಲಕೋಟೆ, ರಾಮನಗರ, ಮಂಗಳೂರಿನಲ್ಲಿ ರಸ್ತೆ ಅಪಘಾತಗಳು ಸಂಭವಿಸಿವೆ. ಮೃತರ ಕುಟುಂಬಸ್ಥರ ಪಾಲಿಗೆ ಕರಾಳ ದಿನವಾಗಿದೆ. ರಾಜ್ಯದಲ್ಲಿ ಇತ್ತೀಚಿಗೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದ್ದು, ಗೌರಿ ಹಬ್ಬದ ದಿನದಂದು ವಿವಿಧ ರಸ್ತೆ ದುರಂತಗಳಲ್ಲಿ 13 ಮಂದಿ ಮೃತಪಟ್ಟಿದ್ದಾರೆ.
ರಾಯಚೂರು: ಟಂಟಂ ವಾಹನ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ರಾಯ ಚೂರು ಹೈದರಾಬಾದ್ ಹೆದ್ದಾರಿಯಲ್ಲಿ ನಡೆ ದಿದೆ. ಓವರ್ ಟೆಕ್ ಮಾಡುವ ವೇಳೆ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿಯಲ್ಲಿದ್ದ ಕ್ಲೀನರ್ ಸಾವನ್ನಪ್ಪಿದ್ದಾನೆ.
ಅಪಘಾತದ ವೇಳೆ ತರಕಾರಿ ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಟಂಟಂ ವಾಹನ ಚಾಲಕರು, ಕ್ಲೀನರ್ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರ: ಲಾರಿಗೆ ಬೈಕ್ ಡಿಕ್ಕಿ ಹೊಡೆದು ಮೂವರ ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ. ಮೃತರನ್ನು ಗುರುಮೂರ್ತಿ (39), ಶೇಕ್ ಹಫೀಜ್ (45), ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಮೃತ ರೆಲ್ಲರೂ ಗಾರೆ ಕೆಲಸವರಾಗಿದ್ದು, ಗಾಯಾಳು ಹನುಮಂತಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯ ಸರ್ವೀಸ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ರಾಮನಗರದಿಂದ ಬಿಡದಿ ಕಡೆಗೆ ಹೋಗುತ್ತಿದ್ದಾಗ ಬೈಕ್ ಲಾರಿಗೆ ಡಿಕ್ಕಿ ಹೊಡೆದಿದೆ. ಒಂದೇ ಬೈಕ್ ನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಾರಿ ಅಡ್ಡ ಬಂದ ಹಿನ್ನಲೆ ಬೈಕ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಉತ್ತರ ಕನ್ನಡ: ಯಲ್ಲಾಪುರ ತಾಲೂಕಿನ ಅರಬೈಲ್‌ನ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಸಿಮೆಂಟ್ ತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ಕಂಟೈನರ್ ಹಾಗೂ ಮಂಗಳೂರಿಗೆ ತೆರಳುತ್ತಿದ್ದ ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಮಂಗಳೂರಿಗೆ ತೆರಳುತ್ತಿದ್ದ ರೇಷ್ಮಾ ಹೆಸರಿನ ಬಸ್ ಹಿಂಬಂದಿಗೆ ಡಿಕ್ಕಿ ಹೊಡೆದಿದೆ.
ಲಾರಿ ಹಿಂಭಾಗದಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ನಿಯಂತ್ರಣ ತಪ್ಪಿ ಮುಂಭಾಗದಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆ ದಿದ್ದಾನೆ. ಬಸ್ ನಲ್ಲಿದ್ದ ಚಾಲಕ ಅಯೂಬ್‌ಗೆ ಗಾಯವಾಗಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ: ಎರಡು ಬೈಕ್‌ಗಳ ನಡುವೆ ಡಿಕ್ಕಿಯಾದ ಪರಿಣಾಮ ಮೂವರ ಸಾವನ್ನಪ್ಪಿದೆ ಘಟನೆ ಬಾಗಲಕೋಟೆಯ ನವನಗರದಲ್ಲಿ ತಡರಾತ್ರಿ ನಡೆದಿದೆ. ಸ್ಕೂಟಿಯಲ್ಲಿದ್ದ ಗೆಳತಿಯರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕ್‌ನಲ್ಲಿದ್ದ ಇಬ್ಬರು ಯುವಕರ ಪೈಕಿ ಒಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಾಯವಾಗಿದೆ.
ನವನಗರದ ಅಬಕಾರಿ ಇಲಾಖೆ ಸಮೀಪದಲ್ಲಿ ನಡೆದಿರುವ ಘಟನೆ ಇದಾಗಿದೆ. ಪ್ರೊಫೆಸರ್ ಕೃತಿಕಾ ಒಂಟಕುದರಿ (32), ಸ್ನೇಹಿತೆ ರಜನಿ ಒಂಟಕುದರಿ (34), ಅಭಿಷೇಕ ಬಂಡಿ ವಡ್ಡರ ಮೃತರು ಎಂದು ಗುರುತಿಸಲಾಗಿದೆ.
ಮಂಗಳೂರು: ಬೈಕ್ ಅಪಘಾತದಲ್ಲಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ಹೊರ ವಲಯದ ಯೆಯ್ಯಾಡಿಯ ಹರಿಪದವು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿಯ ಚೇತನ್ (24) ಮತ್ತು ಕೋಡಿಕಲ್‌ನ ಕಾಶೀನಾಥ್ (17) ಮೃತ ದುರ್ದೈವಿಗಳು.
ಲಾರಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಬೈಕ್ ನಿಯಂತ್ರಣ ತಪ್ಪಿದೆ. ಬೈಕ್‌ನಿಂದ ಬಿದ್ದು ಸವಾರರು ಮೃತ ಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….