ಬೆಂಗಳೂರು, (ಸೆ.13); ಪತಿಯು ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳಕ್ಕೆ ನೀಡಿದ್ದಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯ ನಗರದಲ್ಲಿ ಸಂಭವಿಸಿದೆ.
ಅನುಷಾ ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ಗುರುತಿಸಲಾಗಿದೆ. ಎರಡು ದಿನದ ಹಿಂದೆ ಈ ಘಟನೆ ನಡೆದಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಅನುಷಾ ಇಂದು ಸಾವನ್ನಪ್ಪಿದ್ದಾರೆ.
ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡ್ತಿದ್ದನಂತೆ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿ ಜೊತೆ ಇರುತ್ತಿದ್ದನು. ಇದನ್ನ ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ ಎನ್ನಲಾಗಿದೆ.
ಪತಿಯ ಈ ವರ್ತನೆಯಿಂದ ಬೇಸತ್ತ ಅನುಷಾ, ಗಂಡನಿಗೆ ವಾಟ್ಸಪ್ ವಿಡಿಯೋ ಕಾಲ್ ಮಾಡುತ್ತಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….