ದೊಡ್ಡಬಳ್ಳಾಪುರ, (ಸೆ.07); ನಗರ ಭಾಗದಲ್ಲಿ ಅಳವಡಿಸಲಾಗಿರುವ ಖಾಸಗಿ ಆಂಗ್ಲ ಜಾಹೀರಾತು ಫಲಕವನ್ನ ತೆರವುಗೊಳಿಸುವಂತೆ ರಾಜ್ಯ ವಿಜಯ ಕರ್ನಾಟಕ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಎ.ನಂಜಪ್ಪ ನೇತೃತ್ವದಲ್ಲಿ ಆಂಗ್ಲ ಭಾಷೆಯಲ್ಲಿ ಅಳವಡಿಸಿದ್ದ ಕಂಪನಿ ಹಾಗೂ ನಗರಸಭೆ ಆಯುಕ್ತರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಲಾಗಿದೆ.
ಈ ವೇಳೆ ದೂರು ಸ್ವೀಕರಿಸಿ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ, ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿ 24 ಗಂಟೆಯೊಳಗೆ ಆಂಗ್ಲ ಭಾಷೆಯ ಜಾಹಿರಾತು ಫಲಕಗಳನ್ನು ತೆರವು ಗೊಳಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಮಿತಿಯ ಬಿ ನಯಾಜ್ ಖಾನ್, ಸೋಮರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಕಾರ್ಯದರ್ಶಿ ಜಗನ್ನಾಥ್, ಯುವ ಘಟಕದ ಜಿಲ್ಲಾ ಅಧ್ಯಕ್ಷ ಪಣೀಶ್, ನವೀನ್ ಕುಮಾರ್, ವಿನಯ್, ದೊಡ್ಡಬಳ್ಳಾಪುರ ತಾಲೂಕು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಯ್ಯ ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….