ರಾಮನಗರ, (ಸೆ.07); ಹೆಚ್‌ಎಂಟಿ ಕೈಗಡಿಯಾರ ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾಗಿದ್ದು ಹೆಚ್ ಎಂಟಿ ಕೈಗಡಿಯಾರಗಳನ್ನೇ ಯುವಜನರು ಕಟ್ಟಬೇಕು. ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ನಾನು ಹೆಚ್‌ಎಂಟಿ ಕೈಗಡಿಯಾರ ಕಟ್ಟಿದ್ದೇನೆ. ನೀವೂ ಕಟ್ಟಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಹೆಚ್‌ಎಂಟಿ ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು. ನಮ್ಮ ತಲೆಮಾರಿನ ಯುವಜನರಿಗೆ ಹೆಚ್ ಎಂಟಿ ವಾಚ್ ಎಂದರೆ ಅದೊಂದು ದಂತಕಥೆ ಎಂದಿದ್ದಾರೆ.
ನನ್ನ ತಂದೆ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ಪ್ರಯುಕ್ತ ಹೆಚ್‌ಎಂಟಿ ಕೈಗಡಿಯಾರ ತಮಗೆ ಉಡುಗೊರೆಯಾಗಿ ನೀಡಿ ಕೈಗೆ ಕಟ್ಟಿದರು ಎಂದು ನಿಖಿಲ್ ಬರೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ HMT ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೋಹ್ಲಿ ಇನ್ನಿತರ ಹಿರಿಯ ಅಧಿಕಾರಿಗಳು ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….