ಎತ್ತಿನಹೊಳೆ ಯೋಜನೆ ಮೊದಲ ಹಂತಕ್ಕೆ ಉದ್ಘಾಟನೆ.. ಕಿತಾಪತಿ ತೆಗೆದ ಕೇಂದ್ರ ಸರ್ಕಾರ..!

ಬೆಂಗಳೂರು, (ಸೆ.09); ಬಯಲು ಸೀಮೆಗೆ ನೀರುಣಿಸುವ ಮಹತ್ವದ ಯೋಜನೆಯಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಏತ ಕಾಮಗಾರಿಯನ್ನು ಸಕಲೇಶಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. 

ಈ ಮಧ್ಯೆ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ರಾಜ್ಯ ಸರ್ಕಾರಕ್ಕೆ ಅನೇಕ ಸ್ಪಷ್ಟಿಕರಣ ಕೇಳಿದೆ. ಹಿಂದೆಯೇ ಈ ಪತ್ರ ಬರೆಯಲಾಗಿದೆ.

ವಾಸ್ತವಿಕ ವರದಿ ಸಲ್ಲಿಸಲು ರಾಜ್ಯಕ್ಕೆ ಸೂಚನೆ: ಎತ್ತಿನಹೊಳೆ ಯೋಜನೆಯ ಪೂರ್ಣ ಅನುಷ್ಠಾನಕ್ಕೆ ಅರಣ್ಯಭೂಮಿ ಅಡ್ಡಿಯಾಗಿದೆ ಎಂದು ಹೇಳುತ್ತಲೇ ಇದೆ. ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಮಾರಶೆಟ್ಟಿಹಳ್ಳಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ 10.1301 ಹೆಕ್ಟೇರು ಅರಣ್ಯ ಭೂಮಿ ಅರಣೇಶರವಾಗಿ ಪರಿವರ್ತಿಸಲು ಅನುಮತಿ ಕೋರಿ ಈ ವರ್ಷ ಜೂ.19ರಂದು ಕೇಂದ್ರ ಅರಣ್ಯ ಮಂತ್ರಾಲಯಕ್ಕೆ ತ್ವರಿತ ಪ್ರಸ್ತಾವನೆ ಕಳುಹಿಸಿದೆ.

ಇದಕ್ಕೆ ಆ.7ರಂದು ಪತ್ರ ಬರೆದಿರುವ ಸಚಿವಾಲಯವು ಒಟ್ಟು 12 ಅಂಶಗಳಿಗೆ ಸ್ಪಷ್ಟಿಕರಣ ಮತ್ತು ಹೆಚ್ಚುವರಿ ಮಾಹಿತಿ ಒದಗಿಸುವಂತೆ ತಿಳಿಸಿದೆ.

ಅರಣ್ಯ ಭೂಮಿಗೆ ಏಕೀಕೃತ ಪ್ರಸ್ತಾವನೆ ಕಳುಹಿಸಿ: ವಿಸ್ತ್ರತ ಯೋಜನಾ ವರದಿ(ಡಿಪಿಆರ್)ಯಲ್ಲಿ ಎತ್ತಿನಹೊಳೆ ಯೋಜನೆಗೆ 1200 ಹೆಕ್ಟೇರ್ ಪ್ರದೇಶ ಬೇಕು, ಅದರಲ್ಲಿ ಶೇ.50 ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಉಲ್ಲೇಖಿಸಲಾಗಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ತ್ವರಿತ ಪ್ರಸ್ತಾವನೆ ಹೆಸರಿನಲ್ಲಿ ತುಂಡು ತುಂಡು ರೀತಿಯಲ್ಲಿ ಪ್ರಸ್ತಾವನೆಗಳನ್ನು ಸಲ್ಲಿಸುತ್ತಿದೆ. 

ಆದ್ದರಿಂದ ಹೆಚ್ಚಿನ ಭೂಮಿಯ ಅಗತ್ಯವಿದ್ದರೆ ರಾಜ್ಯ ಸರ್ಕಾರವು ತುಂಡು ರೀತಿಯಲ್ಲಿ ಪ್ರಸ್ತಾವನೆಗಳನ್ನು ಸಲ್ಲಿಸುವ ಬದಲು ಏಕೀಕೃತ ಪ್ರಸ್ತಾವನೆ ಸಲ್ಲಿಸಬೇಕು ಎಂದು ಕೇಂದ್ರ ಸೂಚಿಸಿದೆ.

ಹೆಚ್ಚುವರಿ ಭೂಮಿ ಬಳಕೆ? : ಯೋಜನೆಯ ಅನುಷ್ಠಾನಕ್ಕಾಗಿ 2016ರಲ್ಲಿ ಸಕಲೇಶಪುರ ತಾಲೂಕಿನಲ್ಲಿ 13.93 ಹೆಕ್ಟೇರ್ ಅರಣ್ಯ ಭೂಮಿ ಪರಿವರ್ತಿಸಲು ಆಗಿನ ಯೋಜನಾ ಅನುಷ್ಠಾನ ಸಂಸ್ಥೆ ಕರ್ನಾಟಕ ನೀರಾವರಿ ನಿಗಮ ಪ್ರಸ್ತಾವನೆ ಸಲ್ಲಿಸಿತ್ತು. 

ಬಳಿಕ 2019ರ ನ.13ರಂದು ರಾಜ್ಯ ಸರ್ಕಾರವು ಎರಡನೇ ಹಂತದ ಅರಣ್ಯ ಅನುಮತಿಯ ಮಾರ್ಪಾಡಿಗೆ ಕೇಂದ್ರಕ್ಕೆ ಪತ್ರ ಬರೆದಿತ್ತು. ಅರಣ್ಯ ಮಂತ್ರಾಲಯವು ಉಪಗ್ರಹ ಚಿತ್ರದ ಮೂಲಕ ಪ್ರಸ್ತಾವನೆ ವಿಶ್ಲೇಷಿಸಿದ ನಂತರ ರಾಜ್ಯ ಸರ್ಕಾರಕ್ಕೆ ನ.27ರಂದು ಪತ್ರ ಬರೆದು ಯೋಜನೆಗೆ ಅನುಮೋದಿತ ಪ್ರದೇಶಗಳ ಹೊರಗಿನ ಅರಣ್ಯ ಪ್ರದೇಶ ಬಳಸಿಕೊಂಡಿದೆ.

ಆದ್ದರಿಂದ ಸಂಪೂರ್ಣ ಯೋಜನೆಗೆ ಅನುಮೋದಿಸಲಾದ ಅರಣ್ಯ ಪ್ರದೇಶವನ್ನು ಮರು ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಆದರೆ, ಈವರೆಗೆ ರಾಜ್ಯ ಸರ್ಕಾರ ಇದಕ್ಕೆ ಉತ್ತರಿಸಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯ ಸರ್ಕಾರ ತತ್‌ಕ್ಷಣದ ಪ್ರಸ್ತಾವನೆ (10.1301 ಹೆ.) ಕುರಿತು ಸ್ಪಷ್ಟಿಕರಣ ನೀಡಬೇಕು. ಈ ಅರಣ್ಯ ಭೂಮಿ ಹಿಂದಿನ ಎತ್ತಿನಹೊಳೆ ಯೋಜನೆಯೊಂದಿಗೆ ಜೋಡಣೆಯಾಗಿದ್ದರೆ, ತುಂಡು ಪ್ರಸ್ತಾವನೆ ಗಳನ್ನು ಸಲ್ಲಿಸಲು ಕಾರಣವೇನೆಂದು ಸಮರ್ಥನೆ ಯನ್ನೂ ಸಲ್ಲಿಸುವಂತೆ ಕೇಂದ್ರ ನಿರ್ದೇಶಿಸಿದೆ ಎಂದು ವರದಿಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Wakf Bill) ಅಂಗಿಕಾರವಾಗಿದ್ದು ಇದು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ Harithalekhani

[ccc_my_favorite_select_button post_id="105525"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿರುವ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನ (KGB) ಕಳವು Harithalekhani

[ccc_my_favorite_select_button post_id="105553"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!