ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ಆರ್‌.ಅಶೋಕ ಆಗ್ರಹ

ಬೆಂಗಳೂರು, (ಸೆಪ್ಟೆಂಬರ್‌ 10): ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್‌ ಸರ್ಕಾರ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್‌ ಕಾರ್ಡ್‌ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಬೇಕು ಎಂದು ಆಗ್ರಹಿಸಿದರು. 

ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ರಾಜ್ಯಕ್ಕೂ ಬರಲಿದೆ. ನಮ್ಮ ರಾಜ್ಯದ ಜನರ ಬದುಕು ಭಯೋತ್ಪಾದಕರ ನಿಯಂತ್ರಣಕ್ಕೆ ಹೋಗಬಾರದು. ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಮಾಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು. 

ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಕಾಂಗ್ರೆಸ್‌ ಸಚಿವರು ನಿರಾಕರಿಸಿದ್ದರು. ಪದೇ ಪದೆ ಭಯೋತ್ಪಾದಕರಿಗೆ ಪ್ರೇರಣೆಯಾಗುವ ಹೇಳಿಕೆಗಳನ್ನು ಕಾಂಗ್ರೆಸ್‌ ನಾಯಕರು ನೀಡಿದ್ದಾರೆ. ಇದರಿಂದಾಗಿ ಭಯೋತ್ಪಾದನೆಗೆ ಕುಮ್ಮಕ್ಕು ದೊರೆತಿದೆ. ಕರ್ನಾಟಕದಲ್ಲೇ ಭಯೋತ್ಪಾದನೆ ಮಾಡಿದರೆ ಏನೂ ತೊಂದರೆ ಇಲ್ಲ ಎಂದು ಭಯೋತ್ಪಾದಕರಿಗೆ ಅನ್ನಿಸಿದೆ. ಇದಕ್ಕಾಗಿ ಇಲ್ಲಿ ಹೆಚ್ಚು ಉಗ್ರ ಚಟುವಟಿಕೆ ನಡೆಯುತ್ತಿದೆ ಎಂದು ದೂರಿದರು. 

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದಕರಿಗೆ ಭಯವೇ ಇಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾದಾಗ, ಇದು ವ್ಯಾಪಾರ ವ್ಯಾಜ್ಯ ಎಂದು ಸಚಿವರು ಹೇಳಿದ್ದರು. ಇದರಿಂದಾಗಿಯೇ ಭಯೋತ್ಪಾದನಾ ಚಟುವಟಿಕೆ ವ್ಯವಸ್ಥಿತವಾಗಿ ನಡೆಯುತ್ತಿದೆ. ರಾಮೇಶ್ವರಂ ಕೆಫೆ ಬದಲಾಗಿ ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸಬೇಕೆಂದು ಯೋಜನೆ ರೂಪಿಸಲಾಗಿತ್ತು. ಈ ಪ್ರಕರಣದಲ್ಲಿ ಹಿಂದೂಗಳ ಮೇಲೆ ದಾಳಿ ನಡೆಸಲು ಪ್ಲಾನ್‌ ಮಾಡಲಾಗಿತ್ತು ಎಂದರು. 

ಕಾಂಗ್ರೆಸ್‌ ನಾಯಕರಿಗೆ ಹೆಚ್ಚು ವಿಶ್ವಾಸ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿಗಿಂತಲೂ ಕಾಂಗ್ರೆಸ್‌ ನಾಯಕರಿಗೆ ಹೆಚ್ಚಿನ ವಿಶ್ವಾಸವಿದೆ. ಅದಕ್ಕಾಗಿ ಸಿಎಂ ಕುರ್ಚಿಗೆ ಸ್ಪರ್ಧೆ ಹೆಚ್ಚಿದ್ದು, ಎಲ್ಲರೂ ಮುಖ್ಯಮಂತ್ರಿಯಾಗುತ್ತೇನೆಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ದೂರಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಾಳೆ ಮತ್ತೆ ದೊಡ್ಡಬಳ್ಳಾಪುರದಲ್ಲಿ ನೇಕಾರರ ಭವನ ಶಂಕುಸ್ಥಾಪನೆ..!

ನಿನ್ನೆಯಷ್ಟೇ ನೇಕಾರರ (Weavers) ಭವನ ಶಂಕುಸ್ಥಾಪನೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೈಡ್ರಾಮವನ್ನೆ ಸೃಷ್ಟಿಸಿ ತಣ್ಣಗಾಗಿದೆ.

[ccc_my_favorite_select_button post_id="118262"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!