ಆವೃತ್ತಿಯ ಎಲೆಕ್ಟ್ರಿಕ್ ವಾಹನಗಳ ರ್‍ಯಾಲಿಯಲ್ಲಿ ಪಾಲ್ಗೊಂಡ ಸಚಿವ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ, (ಸೆ.10): ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2030ರ ವೇಳೆಗೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡಲು ಗುರಿ ನಿಗದಿಪಡಿಸಲಾಗಿದ್ದು, ಆ ಗುರಿ ಮುಟ್ಟಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ವಿಶ್ವ EV (ಎಲೆಕ್ಟ್ರಿಕ್ ವಾಹನ) ದಿನ ಅಂಗವಾಗಿ ಭಾರತೀಯ ಅಟೋಮೊಬೈಲ್ ಸೊಸೈಟಿ (Society of Indian Automobile Manufacturers-SIAM) ಹಮ್ಮಿಕೊಂಡಿದ್ದ ಎರಡನೇ ಆವೃತ್ತಿಯ ಎಲೆಕ್ಟ್ರಿಕ್ ವಾಹನಗಳ ರ್‍ಯಾಲಿಯನ್ನು ಸಚಿವರು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸುವ ಮುನ್ನ ಮಾತನಾಡಿದರು.

ಪ್ರಧಾನಿಗಳು ನಿಗದಿಪಡಿಸಿರುವ ಗುರಿ ಮುಟ್ಟಲು ಈಗಾಗಲೇ ಅನೇಕ ನೀತಿಗಳನ್ನು ರೂಪಿಸಲಾಗಿದ್ದು, ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರೀಕ್ ವಾಹನ (EV) ಉದ್ಯಮವೂ ಭಾರತದಲ್ಲಿ ವೆಗಗತಿಯಲ್ಲಿ ಬೆಳೆಯುತ್ತಿದೆ ಎಂದು ಅವರು ಹೇಳಿದರು.

ಪರಿಸರಕ್ಕೆ ಪೂರಕವಾದ ರೀತಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುವಂತೆ ಕ್ರಮ ವಹಿಸಲಾಗಿದೆ ಎಂದು ಕೇಂದ್ರ ಸಚಿವರು ನುಡಿದರು.

ಮುಂದಿನ ಪೀಳಿಗೆಯ ಇಂಧನ ಕ್ಷಮತೆ ತಂತ್ರಜ್ಞಾನ ಅಭಿವೃದ್ಧಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಸುಧಾರಿತ ಬ್ಯಾಟರಿ ಸೇಲ್‌ಗಳಿಗೆ (ACC) ಪ್ರೋಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ((PLI) ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದ ಸಚಿವರು; ₹18,100 ಕೋಟಿ ಗುರಿಯ ಅನುದಾನ ಹೊಂದಿರುವ ಈ ಯೋಜನೆಯು 50 ಗಿಗಾ ವಾಟ್-ಗೋಚಾರ್ (GWh) ಉತ್ಪಾದನಾ ಸಾಮರ್ಥ್ಯವನ್ನು  ಹೊಂದಲು ಉದ್ದೇಶಿಸಲಾಗಿದೆ. ಮೂರು ಕಂಪನಿಗಳು ಈಗಾಗಲೇ 30 GWh ನೀಡಲು ಸಾಮರ್ಥ್ಯ ಹೊಂದಿವೆ ಎಂದು ಸಚಿವರು ವಿವರಿಸಿದರು.

FAME-II ಯೋಜನೆಯು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳ ತಯಾರಿಕೆಗೆ ಕೊಡಲಾಗುತ್ತಿರುವ ಪ್ರೋತ್ಸಾಹವನ್ನು ಮುಂದುವರಿಸಲಾಗುವುದು. ಇದಕ್ಕೆ ₹15,500 ಕೋಟಿ ಹಣವನ್ನು ಒದಗಿಸಲು ಬಜೆಟ್ ನಿರ್ಧರಿಸಲಾಗಿದ್ದು , ಮಾಲಿನ್ಯ ಕಡಿಮೆ ಮಾಡುವುದು ಮತ್ತು ದೇಶಾದ್ಯಂತ ಸಾರ್ವಜನಿಕ ಸಾರಿಗೆಯನ್ನು ವಿದ್ಯುದೀಕರಿಸಲು ಈ ಮೊತ್ತವನ್ನು ಮೀಸಲಿಡಲಾಗಿದೆ ಎಂದು ಸಚಿವರು ಹೇಳಿದರು.

ಇದರೊಂದಿಗೆ ಮಾರ್ಚ್ 2024ರಲ್ಲಿ ಆರಂಭವಾದ ಎಲೆಕ್ಟ್ರಿಕ್ ಮೋಬಿಲಿಟಿ ಪ್ರೋತ್ಸಾಹ ಯೋಜನೆ (EMPS) ಸರಕಾರ ಹೆಚ್ಚು ಒತ್ತು ನೀಡಿದೆ. ವರ್ಷದಿಂದ ವರ್ಷಕ್ಕೆ ಇದು ವೃದ್ಧಿಯಾಗುತ್ತಲೇ ಇದೆ. ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ವ್ಯಾಪಕ ಬಳಕೆಗಾಗಿ ಸರ್ಕಾರದ ಅಚಲ ಬದ್ಧತೆ ಹೊಂದಿದೆ ಎಂದು ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಫಾರ್ಮುಲಾ ಒನ್ ರೇಸರ್ ಕಾರ್ತಿಕ್ ನಾರಾಯಣ್, SIAM ಅಧ್ಯಕ್ಷ ವಿನೋದ ಅಗರ್ವಾಲ್ , ಉಪಾಧ್ಯಕ್ಷ ಶೈಲೇಶ್ ಚಂದ್ರ, ನಿರ್ದೇಶಕರಾದ ರಾಜೇಶ್ ಮೆನನ್ ಮತ್ತು ಡೈರೆಕ್ಟರ್ ಜನರಲ್  ಪ್ರಶಾಂತ್ ಬ್ಯಾನರ್ಜಿ  ಸೇರಿದಂತೆ ಉದ್ಯಮದ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರ್‍ಯಾಲಿಗೆ ಹಸಿರು ನಿಶಾನೆ ತೋರಿಸುವ ಮುನ್ನ ಅವರು ಎಲೆಕ್ಟ್ರಿಕ್ ಆಟೋವನ್ನು ಚಾಲನೆ ಮಾಡಿದರು. ನಂತರ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಚಾಲನೆ ಮಾಡಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsapp, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….</

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111004"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!