ಯಾದಗಿರಿ, (ಸೆ.10); ಶಾಲಾ ವಿದ್ಯಾರ್ಥಿಗಳಿದ್ದ ಆಟೋ ಪಲ್ಟಿಯಾದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಇಬ್ಬರು ಬಾಲಕರಿಗೆ ಕೈ ಮುರಿತವಾಗಿದ್ದು, 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದೆ. ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಹೊಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಮರ್ಥ್ಯಕ್ಕೂ ಮೀರಿ ಹೆಚ್ಚು ವಿದ್ಯಾರ್ಥಿಗಳನ್ನು ಚಾಲಕ ಹತ್ತಿಸಿಕೊಂಡಿದ್ದು ಈ ಘಟನೆಗೆ ಕಾರಣ ಎಂಬ ಆರೋಪ ಕೇಳಿ ಬರುತ್ತಿದ್ದು ಶಹಾಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇತ್ತೀಚೆಗೆ ರಾಯಚೂರಿನಲ್ಲೂ ಶಾಲಾ ವಿದ್ಯಾರ್ಥಿಗಳ ಬಸ್ ಅಪಘಾತಕ್ಕೀಡಾಗಿ ಮೂವರು ಮಕ್ಕಳ ಕಾಲು ಕಟ್ ಆಗಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsapp, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….</