ದೊಡ್ಡಬಳ್ಳಾಪುರ, (ಸೆ.10): ಕುಡಿದ ಮತ್ತಿನಲ್ಲಿ ಮಗನೊಬ್ಬ ಜನ್ಮ ಕೊಟ್ಟ ತಾಯಿಯನ್ನೇ ಚಾಕುವಿನಿಂದ ಚುಚ್ಚಿಕೊಲೆ ಮಾಡಿರುವ ಘಟನೆ ತಾಲೂಕಿನ ಮುದ್ದನಾಯಕನಹಳ್ಳಿ ಗ್ರಾಮದಲ್ಲಿನಡೆದಿದೆ.
ಮೃತ ಮಹಿಳೆಯನ್ನು ರತ್ನಮ್ಮ (55 ವರ್ಷ) ಎಂದು ಗುರುತಿಸಲಾಗಿದೆ. ತಾಲೂಕಿನ ಮುದ್ದನಾಯಕನಹಳ್ಳಿ ಗ್ರಾಮದ ರಾಗರಾಳಗುಟ್ಟೆ ದಿಣ್ಣೆಯ ಮಂಟಪದಲ್ಲಿ ವಾಸವಾಗಿದ್ದ ರತ್ನಮ್ಮ ಎನ್ನುವವರ ಆಕೆಯ ಮಗ ಗಂಗಾಧರ ಎನ್ನುವವ ಕುಡಿದ ಅಮಲಿನಲ್ಲಿ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಪೊಲೀಸರಿಗೆ ದಾರಿಹೋಕರು ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಗಂಗಾಧರ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಇನ್ಸೆಕ್ಟರ್ ಸಾಧಿಕ್ ಪಾಷಾ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಅಡಿಷನಲ್ ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsapp, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….</